ಸ್ವಾಮಿ ವಿವೇಕಾನಂದರ 164 ನೇ. ಜಯಂತಿ ಪ್ರಯುಕ್ತ – ಬನಶ್ರೀ ವೃದ್ಧಾಶ್ರಮದಲ್ಲಿ ಸಾಂತ್ವನ ಸೇವೆ.
ಚಳ್ಳಕೆರೆ ಜ.12

ನಗರದ ಹೊರವಲಯದ ಬೆಂಗಳೂರು ರಸ್ತೆಯ ಶ್ರೀಬನ ಶ್ರೀ ವೃದ್ಧಾಶ್ರಮದಲ್ಲಿ ಜನವರಿ 13 ರ ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಶಿವ ನಗರದ ಶ್ರೀಮತಿ ಜಿ.ಯಶೋಧಾ ಪ್ರಕಾಶ್ ನೇತೃತ್ವದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದಿಂದ ಸ್ವಾಮಿ ವಿವೇಕಾನಂದರ 164 ನೇ. ಜಯಂತ್ಯುತ್ಸವದ ಪ್ರಯುಕ್ತ “ಸಾಂತ್ವನ ಸೇವಾ” ಕಾರ್ಯಕ್ರಮವನ್ನು ಆಯೋಜಿಸಿದ್ದು ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಭಜನೆ ಮತ್ತು ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಅವರಿಂದ ಪ್ರವಚನ ಕಾರ್ಯಕ್ರಮ, ವೃದ್ಧಾಶ್ರಮದ ನಿವಾಸಿಗಳಿಗೆ ಅಗತ್ಯ ವಸ್ತುಗಳ ವಿತರಣೆ ಹಾಗೂ ಅನ್ನ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದು ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ.ಯಶೋಧಾ ಪ್ರಕಾಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

