ಗಣರಾಜ್ಯೋತ್ಸವ ವಿಜೃಂಭಣೆ ಯಿಂದ ಆಚರಿಸ ಬೇಕು – ಜಿ.ಎಚ್ ಶ್ರೀನಿವಾಸ್.
ತರೀಕೆರೆ ಜ.13

ತಾಲೂಕು ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರತಿ ವರ್ಷದಂತೆ ಈ ಬಾರಿಯೂ ವಿಜೃಂಭಣೆ ಯಿಂದ ಗಣರಾಜ್ಯೋತ್ಸವ ಆಚರಿಸ ಬೇಕು ಎಂದು ಶಾಸಕ ಜಿ.ಎಚ್ ಶ್ರೀನಿವಾಸ್ ಹೇಳಿದರು.
ಅವರು ಇಂದು ಪಟ್ಟಣದ ಆಡಳಿತ ಸೌಧ ದ ತಹಶೀಲ್ದಾರ್ ರವರ ಸಭಾಂಗಣದಲ್ಲಿ ದಿನಾಂಕ 26-01-2026 ರಂದು ಗಣರಾಜ್ಯೋತ್ಸವ ಆಚರಿಸಲು ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
ಕಾರ್ಯಕ್ರಮ ನಡೆಯುವ ಬಯಲು ರಂಗ ಮಂದಿರದಲ್ಲಿ ಧ್ವಜಾರೋಹಣ, ಆರಕ್ಷಕ ಇಲಾಖೆ, ಹೋಮ್ ಗಾರ್ಡ್ಸ್, ಅರಣ್ಯ ಇಲಾಖೆ ಸಿಬ್ಬಂದಿಗಳು, ಅಬಕಾರಿ ಇಲಾಖೆ ಸಿಬ್ಬಂದಿಗಳು, ಪೌರ ಕಾರ್ಮಿಕರು, ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಸುವಂತೆ ಸ್ತಬ್ಧ ಚಿತ್ರಗಳು, ನೃತ್ಯ ರೂಪಕಗಳು, ಜೊತೆಗೆ ಸಾಧಕರಿಗೆ ಸನ್ಮಾನ ಏರ್ಪಡಿಸ ಬೇಕು ಎಂದರು.
ಸಭೆಯ ಅಧ್ಯಕ್ಷತೆಯನ್ನು ನಾಡ ಹಬ್ಬಗಳ ಸಮಿತಿ ಅಧ್ಯಕ್ಷರಾದ ತಹಸಿಲ್ದಾರ್ ವಿಶ್ವಜಿತ್ ಮೆಹತ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಉಪ ವಿಭಾಗಾಧಿಕಾರಿಗಳಾದ ಎನ್ ವಿ ನಟೇಶ್ ಹಾಗೂ ಡಿ.ಎಸ್.ಪಿ, ಎಚ್ ಪರಶುರಾಮಪ್ಪ ರವರು ಹಾಗೂ ನೌಕರರ ಸಂಘದ ಅಧ್ಯಕ್ಷರಾದ ಅನಂತಪ್ಪ ರವರು ಉಪಸಿತರಿದ್ದು ಮಿಲ್ಟ್ರಿ ಶ್ರೀನಿವಾಸ್ ಪತ್ರಕರ್ತರಾದ ಎಸ್.ಕೆ ಸ್ವಾಮಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ತರೀಕೆರೆ ಎನ್ ವೆಂಕಟೇಶ್ ಮತ್ತು ಕಾರ್ಯ ನಿರ್ವಹಣಾಧಿಕಾರಿ ಡಾ, ದೇವೇಂದ್ರಪ್ಪ ತೋಟಗಾರಿಕಾ ಇಲಾಖೆ ಅಧಿಕಾರಿ, ಕೃಷಿ ಇಲಾಖೆ ಅಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪುರ ಸಭೆಯ ಅಧಿಕಾರಿಗಳು, ಎಲ್ಲಾ ಇಲಾಖೆಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಎನ್.ವೆಂಕಟೇಶ್. ತರೀಕೆರೆ ಚಿಕ್ಕಮಗಳೂರು

