ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ – ನೂತನ ಕಟ್ಟಡದ ಶಂಕು ಸ್ಥಾಪನೆ.
ಕೊಟ್ಟೂರು ಜ.13


ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ದಿ. 13 ಜನವರಿ ಮಂಗಳವಾರ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಕಛೇರಿಯ ನೂತನ ಕಟ್ಟಡದ ಶಂಕು ಸ್ಥಾಪನೆಯನ್ನು ಶಾಸಕರಾದ ಕೆ.ನೇಮಿರಾಜ್ ನಾಯ್ಕ್ ಹಗರಿಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರ ಮತ್ತು ಎಂ.ಎಂ.ಜೆ ಹರ್ಷವರ್ಧನ್ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಶ್ರೀ ಡಾ, ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು, ತೇಜಾನಾಯ್ಕ್ ಅಧೀಕ್ಷಕ ಅಭಿಯಂತರರು ಸತೀಶ್ ಕಾರ್ಯನಿರ್ವಾಹಕ ಅಭಿಯಂತರರು, ಖಾಜಾ ಮೋಹಿದ್ದಿನ್ ಕಾರ್ಯನಿರ್ವಾಹಕ ಅಭಿಯಂತರರು ಸಿವಿಲ್, ಆರ್ ನಾಗರಾಜ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು, ಆನಂದ್ ಕುಮಾರ್ ಕಾರ್ಯನಿರ್ವಾಹಕ ಅಧಿಕಾರಿಗಳು, ಎ.ನಸರುಲ್ಲಾ ಮುಖ್ಯ ಅಧಿಕಾರಿಗಳು ಪ.ಪಂ ಮತ್ತಿತರರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರದೀಪ್ ಕುಮಾರ್ ಸಿ ಕೊಟ್ಟೂರು

