ಸ್ವಾಮಿ ವಿವೇಕಾನಂದರ ದಾನ-ಧ್ಯಾನಶೀಲತೆಗಳು ಮಕ್ಕಳಿಗೆ ಆದರ್ಶವಾಗಲಿ – ಮಾತಾಜೀ ತ್ಯಾಗಮಯೀ.
ಚಳ್ಳಕೆರೆ ಜ.20

ಸ್ವಾಮಿ ವಿವೇಕಾನಂದರರ ಬಾಲ್ಯ ಜೀವನದಲ್ಲಿ ವ್ಯಕ್ತವಾಗುವ ದಾನ-ಧ್ಯಾನ ಶೀಲತೆಗಳು ಇಂದಿನ ಮಕ್ಕಳಿಗೆ ಆದರ್ಶವಾಗಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಅವರು ಕಿವಿಮಾತು ನೀಡಿದರು.

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ಕಾಟವ್ವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ಆಯೋಜಿಸಿದ್ದ “ವ್ಯಕ್ತಿತ್ವ ನಿರ್ಮಾಣಕಾರಿ” ತರಗತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು “ಸ್ವಾಮಿ ವಿವೇಕಾನಂದರ ದಾನ-ಧ್ಯಾನಸಿದ್ಧಿ”ಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಇಂದಿನ ಮಕ್ಕಳೇ ನಾಳಿನ ರಾಷ್ಟ್ರ ನಿರ್ಮಾಪಕರು, ಶಕ್ತಿಶಾಲೀ ವ್ಯಕ್ತಿತ್ವ ನಿರ್ಮಾಣದ ಮೂಲಕ ಸದೃಢ ರಾಷ್ಟ್ರವನ್ನು ಕಟ್ಟಲು ಸಾಧ್ಯವಾಗುತ್ತದೆ.

ಸ್ವಾಮಿ ವಿವೇಕಾನಂದರ ಚೈತನ್ಯದಾಯಕ ನುಡಿಗಳನ್ನು ಮಕ್ಕಳಿಂದ ಹೇಳಿಸಿದ ಮಾತಾಜೀಯವರು ಅವುಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿ. ಕೊಳ್ಳುವಂತೆ ಕಿವಿಮಾತು ಹೇಳಿದರು.
ಕಾರ್ಯಕ್ರಮದ ಆರಂಭದಲ್ಲಿ ಭಜನೆಯನ್ನು ಶ್ರೀಶಾರದಾಶ್ರಮದ ಸ್ವಯಂ ಸೇವಕ ಯತೀಶ್ ಎಂ ಸಿದ್ದಾಪುರ ನಡೆಸಿ ಕೊಟ್ಟರೆ ತರಗತಿಯ ಕೊನೆಯಲ್ಲಿ ಮಕ್ಕಳಿಗೆ ಅನ್ನ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಕಾಟವ್ವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಶಿಕಲಾ, ಸಹ ಶಿಕ್ಷಕಿ ಸಿ.ಎಸ್ ಭಾರತಿ ಚಂದ್ರಶೇಖರ್, ಅಡುಗೆ ಸಿಬ್ಬಂದಿ ಬೋರಕ್ಕ,ದಿಲೀಪ್, ಲಕ್ಷ್ಮೀ, ಸೂರ್ಯ, ಅನನ್ಯ, ಪ್ರಣವ್, ಯುವರಾಜ್, ದೀಪಕ್ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

