ಪ್ರತಿಯೊಬ್ಬರೂ ದೇಶಕ್ಕಾಗಿ ಕೊಡುಗೆ ನೀಡುವಂತಾಗ ಬೇಕು – ಮಾತಾಜೀ ತ್ಯಾಗಮಯೀ ಸಲಹೆ.

ಚಳ್ಳಕೆರೆ ಜ.26

ದೇಶ ನಮಗೆ ಏನು ಕೊಟ್ಟಿದೆ ಎಂಬುದು ಮುಖ್ಯವಾಗದೆ ನಾವು ದೇಶಕ್ಕಾಗಿ ಏನು ಮಾಡಿದ್ದೇವೆ ಎಂಬುವುದನ್ನು ಪ್ರತಿಯೊಬ್ಬ ಭಾರತೀಯನು ಆಲೋಚಿಸ ಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ನುಡಿದರು.

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ಆವರಣದಲ್ಲಿ “77 ನೇ. ಗಣರಾಜ್ಯೋತ್ಸವ” ದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಅವರು ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಆರತಿ ಮಾಡಿ ಧ್ವಜಾರೋಹಣ ನೆರವೇರಿಸಿ ಆಶೀರ್ವಚನ ನೀಡಿದರು.

ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ, ಬಿ.ಆರ್ ಅಂಬೇಡ್ಕರ್ ಮತ್ತು ಸರ್ದಾರ್ ವಲ್ಲಭಭಾಯ್ ಪಟೇಲ್ ಸೇರಿದಂತೆ ಅನೇಕ ಮಹಾತ್ಮರ ಕೊಡುಗೆಗಳನ್ನು ಸ್ಮರಿಸಬೇಕು ಎಂದರು.

ಶ್ರೀಶಾರದಾಶ್ರಮದ ಸದ್ಭಕ್ತರಾದ ಶ್ರೀಮತಿ ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ ಮಾತನಾಡಿ 1950ರ ಜನವರಿ 26 ರಂದು ಡಾ.ಬಿ.ಆರ್ಅಂ ಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಭಾರತದ ಸಂವಿಧಾನವು ಜಾರಿಗೆ ಬಂದ ಪುಣ್ಯದಿನವಾಗಿದ್ದು ಇದಕ್ಕಾಗಿ ದುಡಿದ ಪ್ರತಿಯೊಬ್ಬರನ್ನು ಸ್ಮರಿಸಿ ಗೌರವಿಸ ಬೇಕೆಂದರು.

ಆಶ್ರಮದ ಸ್ವಯಂ ಸೇವಕ ಯತೀಶ್ ಎಂ ಸಿದ್ದಾಪುರ ಅವರು ವಿವಿಧ ದೇಶಭಕ್ತಿ ಗೀತೆಗಳನ್ನು ಹಾಡಿ ಗಣರಾಜ್ಯೋತ್ಸವದ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ಮಾತನಾಡುತ್ತ ಇಂದು ಭಾರತದ ಸಂವಿಧಾನವು 2 ವರ್ಷ ,11 ತಿಂಗಳು,18 ದಿನಗಳ ಸುದೀರ್ಘ ಪ್ರಯತ್ನದ ಫಲವಾಗಿ ಜಾರಿಗೆ ಬಂದ ದಿನವಾಗಿದ್ದು ಇದು ಲಿಖಿತ ಮತ್ತು ಬೃಹತ್ ಸಂವಿಧಾನವಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.

ಏಕತೆಯ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ದೇಶದ ವಿವಿಧ ಪ್ರಾಂತ್ಯಗಳನ್ನು ಭಾರತದ ಒಕ್ಕೂಟಕ್ಕೆ ಸೇರಿಸಲು ಮಾಡಿದ ಹೋರಾಟ ಮಹತ್ವದ್ದು ಎಂದು ವಿವರಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಲಾಯಿತು. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾಗರಾಜ್, ಶ್ರೀಪಾದ್, ಅಂಬುಜಾ ಶಾಂತಕುಮಾರ್, ಸಂತೋಷ್, ಚೆನ್ನಕೇಶವ, ಪುಷ್ಪಲತಾ, ಮಾನ್ಯ ಸೇರಿದಂತೆ ಯೋಗ ಬಂಧುಗಳು ಭಾಗವಹಿಸಿದ್ದರು.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button