ಕ.ಸಾ.ಪ ಸಂಘಟನಾ ಕಾರ್ಯದರ್ಶಿಯಾಗಿ – ಮಲ್ಲಿಕಾರ್ಜುನ.ಬಿ ಹಡಪದ ಸುಗೂರ.ಎನ್ ನೇಮಕ.
ಚಿತ್ತಾಪುರ ಜ.29

ನಾಲವಾರ ವಲಯ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಸಂಘಟನಾ ಕಾರ್ಯದರ್ಶಿ ಹುದ್ದೆಗೆ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರಪ್ಪ ಗುರುಮಿಠಕಲ್ ಹಾಗೂ ನಾಲವಾರ ವಲಯ ಘಟಕ ಅಧ್ಯಕ್ಷ ಅಂಜುನಾಥ ಎಸ್ ನಾಯ್ಕಲ್ ಅವರು ಸಮ್ಮುಖದಲ್ಲಿ ಮಲ್ಲಿಕಾರ್ಜುನ.ಬಿ ಹಡಪದ ಸುಗೂರ ಎನ್ ಅವರನ್ನು ನಾಲವಾರ ವಲಯ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಅದಕ್ಕಾಗಿ ತಾಲೂಕ ಅಧ್ಯಕ್ಷರು ಮತ್ತು ವಲಯ ಘಟಕ ಅಧ್ಯಕ್ಷರು ಈ ಜವಾಬ್ದಾರಿ ನೀಡಿದ್ದು ಕ.ಸಾ.ಪ ಪರಿಷತ್ತಿನ ಚಟುವಟಿಕೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಈ ನೇಮಕಾತಿ ಮಹತ್ವದ್ದಾಗಿದೆ ಎಂದು ತಿಳಿಸಿದರು.

