ಕಂದಾಯ ಇಲಾಖೆಯ ನೌಕರ ಸಂಘದ ವಿಜಯಪುರ ಜಿಲ್ಲಾ ಅಧ್ಯಕ್ಷರಾಗಿರುವ ಗಂಗಾಧರ ಜೂಲಗುಡ್ಡ 70 ಕೆಜಿ ಭಾರ ಎತ್ತುವ ಸ್ಪರ್ಧೆಯಲ್ಲಿ – ಮತ್ತು ಕಬ್ಬಡ್ಡಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

ಮುದ್ದೇಬಿಹಾಳ ಫೆ.02

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಸರ್ಕಾರಿ ಇಲಾಖೆಗಳ ನೌಕರರ ಭಾಗವಹಿಸುವಿಕೆಯಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟಗಳನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು.

ವಿಜಯಪುರ ಜಿಲ್ಲೆಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ನೌಕರರು ಕ್ರೀಡಾ ಸ್ಫೂರ್ತಿಯಿಂದ ಪಾಲ್ಗೊಂಡು ಸ್ಪರ್ಧೆಗಳಿಗೆ ಹೊಸ ಉತ್ಸಾಹ ತುಂಬಿದರು.

ಭಾರ ಎತ್ತುವ ಸ್ಪರ್ಧೆಯಲ್ಲಿ 70 ಕೆ.ಜಿ ಪುರುಷರ ವಿಭಾಗದಲ್ಲಿ ಸ್ಪರ್ಧಿಸಿದ್ದ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಹೋಬಳಿಯ ನಾಗಬೇನಾಳ ಗ್ರಾಮ ಕಂದಾಯ ಇಲಾಖೆಯ ಗ್ರಾಮ ಲೇಕ್ಕಾಧಿಕಾರಿಗಳಾಗಿರುವ ಗಂಗಾಧರ ಜೂಲಗುಡ್ಡ ಅವರು ಅತ್ಯುತ್ತಮ ಸಾಧನೆ ತೋರಿ ಪ್ರಥಮ ಸ್ಥಾನ ಪಡೆದುಕೊಂಡು ಎಲ್ಲರ ಗಮನ ಸೆಳೆದರು.ಅವರ ಈ ಸಾಧನೆಯ ಹಿನ್ನೆಲೆಯಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಯಾಗಿದ್ದಾರೆ.

ಇದೇ ವೇಳೆ ಕಬಡ್ಡಿಯ ಸ್ಪರ್ಧೆಯಲ್ಲಿಯೂ ಗಂಗಾಧರ ಜೂಲಗುಡ್ಡರವರ ಪರವಾಗಿ ಇದ್ದ ತಂಡ ಉತ್ತಮ ಆಟವಾಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಭಾರ ಎತ್ತುವ ಸ್ಪರ್ಧೆ ಹಾಗೂ ಕಬಡ್ಡಿ ಸ್ಪರ್ಧೆಯಲ್ಲಿ ಎರಡೂ ವಿಭಾಗಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ವಿಶೇಷ ಸಾಧನೆಯಾಗಿದ್ದು, ಅವರ ಪ್ರತಿಭೆಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ.

ಕಂದಾಯ ಇಲಾಖೆಯ ನೌಕರ ಸಂಘದ ವಿಜಯಪುರ ಜಿಲ್ಲಾ ಅಧ್ಯಕ್ಷರಾಗಿರುವ ಗಂಗಾಧರ ಜೂಲಗುಡ್ಡ ಅವರ ಸಾಧನೆಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಹೋದ್ಯೋಗಿಗಳು ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಇನ್ನೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು, ಕ್ರೀಡಾಭಿಮಾನಿಗಳು ಹಾಗೂ ಸಂಘದ ಮುಖಂಡರು ಉಪಸ್ಥಿತರಿದ್ದು, ಕ್ರೀಡಾಕೂಟದ ಯಶಸ್ಸಿಗೆ ಸಹಕಾರ ನೀಡಿದರು. ಸರಕಾರಿ ನೌಕರರಲ್ಲಿ ದೈಹಿಕ ಸಾಮರ್ಥ್ಯ, ಶಿಸ್ತು, ತಂಡದ ಭಾವನೆ ಮತ್ತು ಕ್ರೀಡಾ ಮನೋಭಾವ ಬೆಳೆಸುವ ಉದ್ದೇಶದಿಂದ ಈ ರೀತಿಯ ಕ್ರೀಡಾಕೂಟಗಳು ಅತ್ಯಂತ ಅಗತ್ಯವಾಗಿವೆ ಎಂದು ಸಂಘದ ಮುಖಂಡರು ಅಭಿಪ್ರಾಯ ಪಟ್ಟರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button