ಗ್ರಾಮ ಪಂಚಾಯಿತಿಗೆ ಜಿ.ಪಂ ಉಪ ಕಾರ್ಯದರ್ಶಿ ಭೇಟಿ – ಕಾಯಕ ಗ್ರಾಮದ ಸಮಗ್ರ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಗೋರಬಾಳ ಫೆ.03

ಇಳಕಲ್ಲ ತಾಲ್ಲೂಕಿನ ಗೋರಬಾಳ ಗ್ರಾಮ ಪಂಚಾಯತಿಗೆ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಎನ್.ವಾಯ್ ಬಸರಿಗಿಡದ ಭೇಟಿ ನೀಡಿ ಕಾಯಕ ಗ್ರಾಮದ ಸಮಗ್ರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಉಪ ಕಾರ್ಯದರ್ಶಿ ಎನ್.ವಾಯ್ ಬಸರಗಿಡದ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರ ವಸೂಲಾತಿ, ಭಿಕ್ಷುಕರ ಕರ, ಪ್ರಗತಿಯನ್ನು ಪರಿಶೀಲಿಸಿ, ಬಾಕಿ ತೆರಿಗೆಗಳನ್ನು ತ್ವರಿತವಾಗಿ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಕರ ವಸೂಲಾತಿಯಿಂದ ಗ್ರಾಮಾಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ಲಭ್ಯವಾಗುವುದರಿಂದ, ಈ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು.

ಇದಲ್ಲದೆ ಇ–ಗ್ರಾಮ ಸ್ವರಾಜ್ ಹಾಗೂ ಪಂಚತಂತ್ರ ತಂತ್ರಾಂಶಗಳ ಪರಿಣಾಮಕಾರಿ ಬಳಕೆಯ ಕುರಿತು ಚರ್ಚೆ ನಡೆಸಿ, ಗ್ರಾಮ ಪಂಚಾಯತ್ ಲೆಕ್ಕಪತ್ರಗಳು, ಯೋಜನಾ ಮಾಹಿತಿ, ಆನ್‌ಲೈನ್ ಸೇವೆಗಳು ಹಾಗೂ ನಾಗರಿಕ ಸೇವೆಗಳನ್ನು ಸಮಯಕ್ಕೆ ಸರಿಯಾಗಿ ನವೀಕರಿಸುವಂತೆ ಸೂಚನೆ ನೀಡಿದರು.

ಜನನ–ಮರಣ ಪ್ರಮಾಣಪತ್ರ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಪಿಂಚಣಿ, ಸಾಮಾಜಿಕ ಭದ್ರತಾ ಯೋಜನೆಗಳು ಸೇರಿದಂತೆ ವಿವಿಧ ಸೇವೆಗಳನ್ನು ಪಾರದರ್ಶಕವಾಗಿ ಹಾಗೂ ವಿಳಂಬವಿಲ್ಲದೆ ಸಾರ್ವಜನಿಕರಿಗೆ ಒದಗಿಸುವಂತೆ ನಿರ್ದೇಶನ ನೀಡಿದರು.

ಇನ್ನೂ ನರೇಗಾ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳ ಪರಿಶೀಲನೆ ನಡೆಸಿ, ಕಾರ್ಮಿಕರಿಗೆ ಸಮರ್ಪಕ ಉದ್ಯೋಗ ಒದಗಿಸುವುದು, ಹಾಜರಿ ಹಾಗೂ ವೇತನ ಪಾವತಿಯಲ್ಲಿ ಪಾರದರ್ಶಕತೆ ಕಾಯ್ದು ಕೊಳ್ಳುವುದು ಮತ್ತು ಕಾಮಗಾರಿಗಳನ್ನು ಗುಣಮಟ್ಟ ದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣ ಗೊಳಿಸುವಂತೆ ಸೂಚನೆ ನೀಡಿದರು.

ಮುಂದುವರೆದು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಂತೆ ಪಂಚಾಯತ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಮುರುಳಿಧರ ದೇಶಪಾಂಡೆ, ಸಹಾಯಕ ನಿರ್ದೇಶಕರಾದ ಮಹಾಂತೇಶ್ ಛಲವಾದಿ, ಈಗಂಗಾಧರ ಹನಮಸಾಗರ, ಜಿಲ್ಲಾ ಐ.ಇ.ಸಿ ಸಂಯೋಜಕ ಅಜಯ್ ಸೂಳಿಕೇರಿ ಗ್ರಾಮ, ಗೊರಬಾಳ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುರ್ತುಜಾ ದಖ್ಖನಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button