ಸದ್ವಿಚಾರ ಪ್ರಸಾರ ಅತ್ಯಮೂಲ್ಯ ಸೇವೆ – ಶ್ರೀಮತಿ ಜಿ.ಯಶೋಧಾ ಪ್ರಕಾಶ್.
ಚಳ್ಳಕೆರೆ ಫೆ.06

ಸದ್ವಿಚಾರವನ್ನು ಪ್ರತಿಯೊಬ್ಬರಿಗೂ ಪ್ರಸಾರ ಮಾಡುವುದು ಅತ್ಯಮೂಲ್ಯ ಸೇವೆ ಎಂದು ಚಳ್ಳಕೆರೆಯ ಶಿವನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ.ಯಶೋಧಾ ಪ್ರಕಾಶ್ ತಿಳಿಸಿದರು.

ಶಿವ ನಗರದ ತಮ್ಮ ಜಿ.ವಿ.ಎಸ್.ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ “ಮುನ್ನಡೆಸುವ ಮಹಾಶಕ್ತಿ” ಎಂಬ ಅಧ್ಯಾಯವನ್ನು ಓದಿದರು.

ಈ ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀದೇವಿಸ್ತುತಿ ಪಠಣ, ವಿಶೇಷ ಭಜನೆ ಮತ್ತು ಶ್ರೀಮದ್ ಭಗವದ್ಗೀತೆಯ ಶ್ಲೋಕಗಳ ಕಲಿಕಾ ತರಗತಿ ನಡೆಯಿತು.

ಸತ್ಸಂಗ ಕಾರ್ಯಕ್ರಮದಲ್ಲಿ ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ, ರಶ್ಮಿ ವಸಂತ, ರಶ್ಮಿ ರಮೇಶ್, ಸುಜಾತಾ ಬಸವರಾಜ್, ಪಂಕಜಾ, ಯತೀಶ್ ಎಂ ಸಿದ್ದಾಪುರ, ಸುಧಾಮಣಿ, ಕವಿತಾ ಗುರುಮೂರ್ತಿ, ಶಾರದಮ್ಮ, ವೀರಮ್ಮ, ಶೈಲಜಾ, ಕೃಷ್ಣವೇಣಿ ಹಾಜರಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

