ಪ್ರಕಟಣೆ ರಾಜ್ಯ ಸರ್ಕಾರದ – ಸಚಿವ ಸಂಪುಟದ ತೀರ್ಮಾನ.
ಬೆಂಗಳೂರು ಫೆ.06

ಸ್ಥಳೀಯ ಪ್ರಾಧಿಕಾರಗಳ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಗೌಪ್ಯತೆಯನ್ನು ಕಾಪಾಡಿ ಕೊಳ್ಳುವ ಉದ್ದೇಶದಿಂದ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಹಿಂದಿನಂತೆ ಮತ ಪತ್ರಗಳ ಮೂಲಕ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಮತ ಪತ್ರ ಬಳಸಿ ಚುನಾವಣೆ ನಡೆಸಲು ಈಗಾಗಲೇ ನಿರ್ಧಾರ ತೆಗೆದು ಕೊಳ್ಳಲಾಗಿದೆ.
ಇದೀಗ ಗ್ರಾಮೀಣ ಸೇರಿದಂತೆ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಅದೇ ಮಾದರಿ ಅನುಸರಿಸಲು ಕಾಯ್ದೆಗೆ ತಿದ್ದುಪಡಿ ತಂದು, ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ಬದಲು ಮತ ಪತ್ರಗಳ (ಬ್ಯಾಲೆಟ್ ಪೇಪರ್) ಮೂಲಕವೇ ಚುನಾವಣೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

