ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾದ – ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಚಿತ್ರದುರ್ಗ ಫೆ.07


ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ಭಾಗವಹಿಸಲು ತೆರಳುತ್ತಿರುವ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಯಾಗಿ ರಾಜ್ಯ ಮಟ್ಟಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಡಿ.ಡಿ.ಪಿ.ಐ ಮಂಜುನಾಥ್ ರವರು ಶುಭ ಕೋರಿದರು.

ಈ ಸಂದರ್ಭದಲ್ಲಿ ವಿಷಯ ಪರಿವೀಕ್ಷಕರಾದ ರಂಗನಾಯಕ್, ಗೋವಿಂದಪ್ಪ, ತಂಡದ ಮೇಲ್ವಿಚಾರಕರಾದ ಧನಂಜಯರೆಡ್ಡಿ ಟಿ.ಎಂ ವಿಜಯಕಲಾ ಸೇರಿದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

