ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ 4 & 7 ತರಗತಿ ಮಕ್ಕಳಿಗೆ – 5 ಲಕ್ಷ ಸ್ಕಾಲರ್ಶಿಪ್ ಗೆಲ್ಲಿರಿ ಎಂ.ಎಸ್ ಕೊಪ್ಪ.
ಹುಲ್ಲೂರ್ ಫೆ.09

ಮುದ್ದೇಬಿಹಾಳ ತಾಲೂಕಿನ ಹುಲ್ಲೂರು ಗ್ರಾಮದ ಚನ್ನಬಸವ ಶ್ರೀ ಎಜುಕೇಶನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢ ಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ 5 ಲಕ್ಷ ಸ್ಕಾಲರ್ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್ ಕೊಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8.3.206 ರಂದು ಬೆಳಿಗ್ಗೆ 11:30 ಕ್ಕೆ ನಡೆಯಲಿರುವ ಪರೀಕ್ಷೆಗೆ ನಾಲ್ಕನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲು 10 ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಚೆಕ್ ಮೂಲಕ ಅಥವಾ ಉಚಿತ ಶಿಕ್ಷಣ ಶಾಲೆಯಲ್ಲಿ ನೀಡಲಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.

15-03-2026 ರಂದು ಬೆಳಿಗ್ಗೆ 11:30 ಕ್ಕೆ ನಡೆಯಲಿರುವ ಏಳನೇ ತರಗತಿ ಮಕ್ಕಳಿಗೆ 5 ಲಕ್ಷ ಸ್ಕಾಲರ್ಶಿಪ್ ನ್ನು ನೀಡಲಾಗುತ್ತದೆ. ಕನ್ನಡ ಹಾಗೂ ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ, ಶಾಲೆಯ ಅಧ್ಯಕ್ಷ ಎಂ,ಎಸ್ ಕೊಪ್ಪ ತಿಳಿಸಿದರು ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ:- 9611075173, 8618927278, 8088435282ನ್ನು ಸಂಪರ್ಕಿಸ ಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಶಾಲೆಯ ಮುಖ್ಯ ಗುರು ಮಾತೆ ರೇಖಾ ಎಂ.ಎಸ್ ಹಾಗೂ ಶಿಕ್ಷಕರು ಶಿಕ್ಷಕಿಯರು ಇದ್ದರು.
ತಾಲೂಕ ವರದಿಗಾರರು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಬಸವರಾಜ. ಸಂಕನಾಳ ಮುದ್ದೇಬಿಹಾಳ
