ಅಸಮಾನತೆ ಅಸ್ಪೃಶ್ಯತೆ ವಿರುದ್ಧ ಅಂಬೇಡ್ಕರ್ ಹೋರಾಟ – ತರೀಕೆರೆ ಎನ್ ವೆಂಕಟೇಶ್.

ಮಂಗಳೂರು/ಕೋಣಾಜೆ ಫೆ.12

ಪ್ರಪಂಚದಲ್ಲಿಯೇ ಶ್ರೇಷ್ಠ ಸಂವಿಧಾನ ನೀಡಿದವರು ಡಾ, ಬಿ.ಆರ್ ಅಂಬೇಡ್ಕರ್ ರವರು ಎಂದು ಮಹಾತ್ಮ ಪ್ರೊ, ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ತರೀಕೆರೆ ಎನ್ ವೆಂಕಟೇಶ್ ಹೇಳಿದರು.

ಅವರು ಇಂದು ಸಂವಿಧಾನ ಶಿಲ್ಪಿ ಡಾ, ಬಿ.ಆರ್ ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್ ಉಲ್ಲಾಳ ಇವರು ಮಂಗಳೂರಿ ಕೊಣಾಜೆ ಪದವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್ ರವರ 135 ನೇ. ಜನ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಭಾಷಣ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ಭಾರತದಲ್ಲಿ ಅಂದಿನ ಕಾಲದಲ್ಲಿ ಅತಿ ಹೆಚ್ಚು ಪದವಿಗಳನ್ನು ಪಡೆದು ವ್ಯಾಸಂಗ ಮಾಡಿದವರು, ಮಹಿಳೆಯರ ಮೇಲಿನ ಶೋಷಣೆ ಅಸಮಾನತೆಯ ವಿರುದ್ಧ ಹೋರಾಟ ಮಾಡಿದ್ದ ಅಂಬೇಡ್ಕರ್ ರವರಂತೆ ಮಕ್ಕಳು ಹೆಚ್ಚು ವಿದ್ಯಾಭ್ಯಾಸ ಮಾಡಬೇಕು, ಉನ್ನತ ಸ್ಥಾನಮಾನ ಪಡೆದು ದೇಶಕ್ಕೆ ಕೀರ್ತಿ ತರಬೇಕು ಎಂದು ಹೇಳಿದರು.

ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕೊಣಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಜನಿ ಡಿ ಗಟ್ಟಿ ರವರು ಮಾತನಾಡಿ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ರವರ ವಿಚಾರ ಧಾರೆಗಳು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಕೋರಿದರು.

ಟ್ರಷ್ಟಿನ ಸ್ಥಾಪಕ ಅಧ್ಯಕ್ಷರಾದ ಯಾದವ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸರ್ಕಾರಿ ಶಾಲೆಯ ಮಕ್ಕಳು ಅಂಬೇಡ್ಕರ್ ಅವರ ಕುರಿತು ಹೆಚ್ಚು ವಿಷಯಗಳನ್ನು ತಿಳಿಯ ಬೇಕು ಎಂದು ಅಂಬೇಡ್ಕರ್ ಅವರ ಬಗ್ಗೆ ಭಾಷಣ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸಿರುತ್ತೇವೆ, ಪ್ರೌಢ ಶಾಲಾ ವಿಭಾಗ ಮತ್ತು ಪ್ರಾಥಮಿಕ ಶಾಲೆ ವಿಭಾಗದಲ್ಲಿ ಪ್ರತ್ಯೇಕವಾಗಿ ಏರ್ಪಡಿಸಲಾಗಿದೆ ಎಂದು ಹೇಳಿದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಅಬ್ದುಲ್ ಲತೀಫ್ ಕೋಡಿಜಾಲ್ ಮಾತನಾಡಿ ಯಾದವ್ ರವರು ಅಂಬೇಡ್ಕರ್ ವಿಚಾರಗಳನ್ನು ಎಲ್ಲರಿಗೂ ತಿಳಿಯುವಂತೆ ಮಾಡಿದ್ದಾರೆ ಎಂದು ಹೇಳಿದರು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಿಕಾ ರೈ ಕೋಟೆ ಕಾರು ಗುತ್ತು ರವರು ಮಾತನಾಡಿ ಪ್ರತಿಯೊಂದು ಶಾಲೆಯಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ನಡೆಸಬೇಕು ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ವ್ಯಾಸಂಗದ ಕಡೆ ಗಮನ ಕೊಡಬೇಕು ಡಿ.ಎಸ್.ಎಸ್ ರಾಜ್ಯ ಸಂಚಾಲಕರು ಅಧ್ಯಕ್ಷರಾದ ತರೀಕೆರೆ ಎನ್.ವೆಂಕಟೇಶ್ ರವರು ಅರ್ಥ ಪೂರ್ಣವಾಗಿ ಅಂಬೇಡ್ಕರ್ ಬಗ್ಗೆ ತಿಳಿಸಿದ್ದಾರೆ ಎಂದು ಹೇಳಿದರು.

ಮಂಗಳ ಗ್ರಾಮೀಣ ಯುವಕ ಸಂಘ ಕೊಣಾಜೆ, ಅಧ್ಯಕ್ಷರಾದ ಎ ಕೆ ಅಬ್ದುಲ್ ರಹೀಮಾನ್ ಕೋಡಿಜಲ್ ರವರು ಮಾತನಾಡಿ ದೇಶದಲ್ಲಿ ಸಮಾನತೆ ಸಹಬಾಳ್ವೆಗೆ ಅಂಬೇಡ್ಕರ್ ರವರೆ ಕಾರಣ ಅವರ ಬಗ್ಗೆ ಜ್ಞಾನ ಸಂಪಾದಿಸಿದ್ದೇವೆ ಎಂದರು. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಉಪನ್ಯಾಸಕರಾದ ರಾಜೀವ ಪಿ ರವರು ಮಾತನಾಡಿ ವಿದ್ಯಾರ್ಥಿಗಳು ಅಂಬೇಡ್ಕರ್ ಬಗ್ಗೆ ಓದುವ ಅಭ್ಯಾಸ ಬೆಳೆಸಿ ಕೊಳ್ಳಬೇಕು ಆ ಕೆಲಸದ ಪ್ರಯತ್ನದಲ್ಲಿ ಯಾದವ್ ರವರು ಮಾಡಿರುವ ಪ್ರಯತ್ನ ಯಶಸ್ವಿಯಾಗಲಿ ಎಂದು ಹೇಳಿದರು.

ಶಾಲಾ ಮುಖಪಾಧ್ಯಾಯರಾದ ಸಿಲ್ದಿಯ ಬಿ.ಎಂ ಮಿನೇಜಸ್ ರವರು ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್ ನಿಂದ ಆಗುವ ಅನಾಹುತಗಳನ್ನು ತಿಳಿಯಿರಿ ಮೊಬೈಲ್ ನಿಂದ ದೂರವಿರಿ ಪುಸ್ತಕದ ಗೂಡನ್ನು ಮನೆಯಲ್ಲಿ ಮಾಡಿ ಪುಸ್ತಕಗಳನ್ನು ಓದುವದರಿಂದ ಜ್ಞಾನ ಅಭಿವೃದ್ಧಿ ಯಾಗುತ್ತದೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ಶಿವರಾಜ್ ಪಾಟೀಲ್ ಮಾತನಾಡಿ ಅಂಬೇಡ್ಕರ್ ಅವರ ಸಂದೇಶಗಳಾದ ಶಿಕ್ಷಣ ಸಂಘಟನೆ ಹೋರಾಟಗಳನ್ನು ಪಾಲಿಸಬೇಕು ಅವರ ಭಾವನೆಗಳು ಪ್ರತಿಯೊಬ್ಬರಲ್ಲೂ ಅಡಗಿವೆ ಸಮಾಜ ಚಿಕಿತ್ಸೆಕರಾದ ಇವರು ನೀಡಿರುವ ಹಕ್ಕುಗಳನ್ನು ಪಡೆಯಲು ಸಂವಿಧಾನವನ್ನು ಓದಿ ತಿಳಿಯ ಬೇಕು ಪ್ರಶ್ನಿಸ ಬೇಕು ಹಕ್ಕುಗಳನ್ನು ಪಡೆಯ ಬೇಕು ಎಂದು ಹೇಳಿದರು. ಶರತ್ ಪ್ರಸಾದ್ ಸ್ವಾಗತಿಸಿ ನಿರೂಪಿಸಿ ವಂದಿಸಿದರು.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್.ವೆಂಕಟೇಶ್. ತರೀಕೆರೆ ಚಿಕ್ಕಮಗಳೂರು

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button