ಧರ್ಮವನ್ನು ಸಂಸ್ಥಾಪಿಸಿದವರು ಶ್ರೀರಾಮಕೃಷ್ಣ ಪರಮಹಂಸರು – ಶ್ರೀಮತಿ ಎಚ್.ಲಕ್ಷ್ಮೀದೇವಮ್ಮ ಅಭಿಪ್ರಾಯ.
ಚಳ್ಳಕೆರೆ ಫೆ.15

ಶ್ರೀರಾಮಕೃಷ್ಣ ಪರಮ ಹಂಸರು ಧರ್ಮವನ್ನು ಸಂಸ್ಥಾಪಿಸಿದ ಅವತಾರ ವರಿಷ್ಠರು ಎಂದು ಚಳ್ಳಕೆರೆಯ ತ್ಯಾಗರಾಜ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಎಚ್.ಲಕ್ಷ್ಮೀದೇವಮ್ಮ ಅಭಿಪ್ರಾಯ ಪಟ್ಟರು.
ತ್ಯಾಗರಾಜ ನಗರದ ಶ್ರೀಮತಿ ನಂಜಮ್ಮ ಕೆಂಚಪ್ಪ ಶಿಕ್ಷಕರ ಸವಿತಾ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಶ್ರೀರಾಮಕೃಷ್ಣ ಪರಮಹಂಸರ ಜೀವನ ಮತ್ತು ಸಂದೇಶಗಳ” ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮರಕ್ಷಾ ಸ್ತೋತ್ರ ಪಠಣ, ಶ್ರೀರಾಮಕೃಷ್ಣರ ನಾಮಸ್ಮರಣೆ, ವಿಶೇಷ ಭಜನೆ ಮತ್ತು ಯತೀಶ್ ಎಂ ಸಿದ್ದಾಪುರ ಅವರಿಂದ “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಕಾರ್ಯಕ್ರಮ ನಡೆಯಿತು.
ವಿಶೇಷ ಸತ್ಸಂಗದಲ್ಲಿ ಸದ್ಭಕ್ತರಾದ ಶ್ರೀಮತಿ ಎಂ ಲಕ್ಷ್ಮೀದೇವಮ್ಮ, ಎಂ.ಗೀತಾ ನಾಗರಾಜ್, ಸೌಮ್ಯ ಪ್ರಸಾದ್, ಗೀತಾ ಸುಂದರೇಶ್ ದೀಕ್ಷಿತ್, ಪ್ರೇಮಾ, ಸುವರ್ಣಮ್ಮ, ಪಂಕಜಾ, ಸರಸ್ವತಿ, ಅನುಸೂಯ ರಾಘವೇಂದ್ರ, ಸುನೀತಾ ಹಾಜರಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

