ಶ್ರೀಶಾರದಾಶ್ರಮದಿಂದ ಬುಡಗ ಜಂಗಮ ಅಲೆಮಾರಿ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ – ಮಾತಾಜೀ ತ್ಯಾಗಮಯೀ.
ಚಳ್ಳಕೆರೆ ಫೆ.16

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಿಂದ ಪ್ರತಿ ತಿಂಗಳು ಚಳ್ಳಕೆರೆ ತಾಲೂಕಿನ ಅಲೆಮಾರಿ ಕುಟುಂಬಗಳಿಗೆ ದಿನ ಬಳಕೆಯ ವಸ್ತುಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ತಿಳಿಸಿದರು.

ನಗರದ ಹೊರ ವಲಯದ ಭರಮಸಾಗರ ರಸ್ತೆಯ ಮೈರಾಡ್ ಕಾಲೋನಿಯ ಬುಡಗ ಜಂಗಮ ಅಲೆಮಾರಿ ಕುಟುಂಬಗಳಿಗೆ ದಿನಸಿ ಕಿಟ್ ಮತ್ತು ಪಾತ್ರೆ-ತಟ್ಟೆ-ಲೋಟ ವಿತರಿಸಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಬುಡಗ ಜಂಗಮ ಅಲೆಮಾರಿಗಳ ಮುಖಂಡ ಬಲರಾಮ ಮಾತನಾಡಿ ದಾನದಿಂದ ಮನುಷ್ಯ ಧನ್ಯತೆಯನ್ನು ಪಡೆಯುತ್ತಾನೆ.

ಇಂತಹ ಪವಿತ್ರವಾದ ಕಾರ್ಯಕ್ರಮವನ್ನು ನಗರದ ಶ್ರೀಶಾರದಾಶ್ರಮವು ಮಾಡುತ್ತಿರುವುದು ನಮ್ಮಂತಹ ಅಲೆಮಾರಿ ಕುಟುಂಬಗಳಿಗೆ ಉಪಯೋಗವಾಗುತ್ತಿದ್ದು ನೆಮ್ಮದಿಯ ಜೀವನ ನಡೆಸಲು ಸಹಾಯವಾಗುತ್ತಿದೆ ಎಂದು ಕೃತಜ್ಞತೆ ಸಲ್ಲಿಸಿದರು.

ಸಮಾಜ ಸೇವಕ ಮತ್ತು ಶ್ರೀಶಾರದಾಶ್ರಮದ ಸದ್ಭಕ್ತ ಯತೀಶ್ ಎಂ ಸಿದ್ದಾಪುರ ಮಾತನಾಡಿ ಸ್ವಾಮಿ ವಿವೇಕಾನಂದರು ತಿಳಿಸಿದಂತೆ ಇಂದು ಬುಡಗ ಜಂಗಮ ಅಲೆಮಾರಿ ಕುಟುಂಬಗಳಿಗೆ ದಿನ ಬಳಕೆಯ ವಸ್ತುಗಳ ವಿತರಣೆಯ ಮೂಲಕ “ಜೀವ ಸೇವೆಯೇ ಈಶ ಸೇವೆ” ಯ ಸಿದ್ಧಾಂತವನ್ನು ಶ್ರೀಶಾರದಾಶ್ರಮವು ಅನುಸರಿಸಿ ಅನುಷ್ಠಾನಕ್ಕೆ ತರುತ್ತಿರುವುದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದರು.

ದಿನಸಿ ಕಿಟ್ ಗಳ ವಿತರಣಾ ಸಮಾರಂಭದಲ್ಲಿ ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ, ಎಂ ಗೀತಾ ನಾಗರಾಜ್, ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ, ಗೀತಾ ಪ್ರಕಾಶ್, ಅಂಬುಜಾ, ವಿದ್ಯಾ, ಕವಿತಾ, ಸರಸ್ವತಿ, ಸಂತೋಷ್, ಚೆನ್ನಕೇಶವ, ಹೃತಿಕ್, ಭಾವನಾ, ರಾಘವೇಂದ್ರ, ಡಾ, ಭೂಮಿಕ ಸೇರಿದಂತೆ ಬುಡಗ ಜಂಗಮ ನಿವಾಸಿಗಳು ಉಪಸ್ಥಿತರಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

