20/21 ರಂದು ಉಚಿತ ಆರೋಗ್ಯ – ತಪಾಸಣಾ ಶಿಬಿರ.

ಚಳ್ಳಕೆರೆ ಫೆ.19

ನಗರದ ಹೊರ ವಲಯದ ನರಹರಿ ನಗರದ ಶ್ರೀನರಹರೇಶ್ವರ ದೇವಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘ, ಚಿತ್ರದುರ್ಗ ಜಿಲ್ಲಾ ಘಟಕ, ಬಾಪೂಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಶ್ರೀನರಹರಿ ಸೇವಾ ಪ್ರತಿಷ್ಠಾನ, ನಾಗ ಸಿಂಹಾದ್ರಿ ಚಾರಿಟೀಸ್ ನ ಸಹಯೋಗದಲ್ಲಿ “ಉಚಿತ ಆರೋಗ್ಯ ತಪಾಸಣಾ ಶಿಬಿರ” ವು ಫೆಬ್ರವರಿ 20 ರ ಶುಕ್ರವಾರ ಸಂಜೆ 4 ಗಂಟೆಗೆ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗಲಿದ್ದು ಮುಖ್ಯ ಅತಿಥಿಗಳಾಗಿ ಡ, ಚಂದ್ರಕಾಂತ ನಾಗಸಮುದ್ರ, ಡಾ, ಸಿ.ಟಿ ಬಸವರಾಜಪ್ಪ, ಡಾ‌, ಉದಯ ಭಾಸ್ಕರ್ ಪಾಲ್ಗೊಳ್ಳಲಿದ್ದು 21 ರ ಶನಿವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು.

ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಅವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡುವರು.

ಆರೋಗ್ಯ ಶಿಬಿರದಲ್ಲಿ ವಿವಿಧ ತಜ್ಞ ವೈದ್ಯರು ಭಾಗವಹಿಸಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆರೋಗ್ಯ ಶಿಬಿರದ ಸದುಪಯೋಗ ಪಡೆದು ಕೊಳ್ಳುವಂತೆ ಶ್ರೀನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪೂಜ್ಯ.ವೈ ರಾಜಾರಾಮ್ ಗುರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 7204351903, 9900114909 ದೂರವಾಣಿ ಸಂಖ್ಯೆಗಳಿಗೆ ಕರೆಮಾಡಿ ನೋಂದಾಯಿಸುವಂತೆ ಕೋರಲಾಗಿದೆ.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button