ಶಾರದಾಮಾತೆಯವರ ದೃಷ್ಟಿಕೋನ ವಿಶಾಲವಾದದ್ದು – ಶ್ರೀಮತಿ ಜಿ.ಯಶೋಧಾ ಪ್ರಕಾಶ್.

ಚಳ್ಳಕೆರೆ ಫೆ.23

ಶ್ರೀಮಾತೆ ಶಾರದಾದೇವಿಯವರು ಹೊಂದಿದ್ದ ದೃಷ್ಟಿಕೋನ ಅತ್ಯಂತ ವಿಶಾಲವಾದದ್ದು‌ ಎಂದು ಚಳ್ಳಕೆರೆಯ ಶಿವ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ತಿಳಿಸಿದರು.

ಶಿವ ನಗರದ ತಮ್ಮ ಜಿ.ವಿ.ಎಸ್.ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ ಮಾತನಾಡುತ್ತಿದ್ದರು.

ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಭಜನೆ,ಶ್ರೀಮದ್ ಭಗವದ್ಗೀತೆಯ ಶ್ಲೋಕಗಳ ಕಲಿಕಾ ತರಗತಿ ನಡೆಯಿತು.

ಕಾರ್ಯಕ್ರಮದಲ್ಲಿ ಸದ್ಭಕ್ತರಾದ ಶ್ರೀಮತಿ ಸುಧಾಮಣಿ, ನಾಗರತ್ನಮ್ಮ, ಶಾರದಾಮ್ಮ, ಯತೀಶ್ ಎಂ ಸಿದ್ದಾಪುರ, ಶೈಲಜಾ, ರಶ್ಮಿ ವಸಂತ, ರಶ್ಮಿ ರಮೇಶ್, ವಿಜಯಲಕ್ಷ್ಮೀ, ಅನಿತಾ ಯಾದವರೆಡ್ಡಿ ಭಾಗವಹಿಸಿದ್ದರು.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button