ಶಾರದಾದೇವಿಯವರು ಸಾಕ್ಷಾತ್ ಜಗನ್ಮಾತೆ – ಶ್ರೀಮತಿ ಜಿ.ಯಶೋಧಾ ಪ್ರಕಾಶ್.
ಚಳ್ಳಕೆರೆ ಫೆ.26

ಶ್ರೀಮಾತೆ ಶಾರದಾದೇವಿಯವರು ಸಾಕ್ಷಾತ್ ಜಗನ್ಮಾತೆಯಾಗಿದ್ದರು ಎಂದು ಚಳ್ಳಕೆರೆಯ ಶಿವ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ.ಯಶೋಧಾ ಪ್ರಕಾಶ್ ತಿಳಿಸಿದರು.

ಶಿವ ನಗರದ ತಮ್ಮ ಜಿ.ವಿ.ಎಸ್ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು “ಶ್ರೀಶಾರದಾದೇವಿ ಜೀವನ ಗಂಗಾ” ಗ್ರಂಥ ಪಾರಾಯಣ ಮಾಡುತ್ತ ಮಾತನಾಡುತ್ತಿದ್ದರು. ಸತ್ಸಂಗದ ಪ್ರಯುಕ್ತ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ವಿಶೇಷ ಭಜನೆ, ಶ್ರೀಮದ್ ಭಗವದ್ಗೀತೆಯ ಶ್ಲೋಕಗಳ ಕಲಿಕಾ ತರಗತಿ ನಡೆಯಿತು.

ಸತ್ಸಂಗ ಸಭೆಯಲ್ಲಿ ಶ್ರೀಮತಿ ವೀರಮ್ಮ, ರಶ್ಮಿ ವಸಂತ, ರಶ್ಮಿ ರಮೇಶ್, ವಿಜಯಲಕ್ಷ್ಮೀ, ಗೀತಾಲಕ್ಷ್ಮೀ, ಸೌಮ್ಯ ಪ್ರಸಾದ್, ಯತೀಶ್.ಎಂ ಸಿದ್ದಾಪುರ, ಜಯಮ್ಮ, ಸುಧಾಮಣಿ, ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ, ಶೈಲಜಾ, ಕೃಷ್ಣವೇಣಿ, ಸರಸ್ವತಿ ರಾಜು, ಕವಿತಾ ಪಾಲ್ಗೊಂಡಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

