ಶಾರದಾದೇವಿಯವರ ವ್ಯವಹಾರ ಪ್ರಜ್ಞೆ ಗಮನೀಯವಾದದ್ದು – ಮಾತಾಜೀ ತ್ಯಾಗಮಯೀ.

ಚಳ್ಳಕೆರೆ ಫೆ.27

ಶ್ರೀಮಾತೆ ಶಾರದಾದೇವಿಯವರ ವ್ಯವಹಾರ ಪ್ರಜ್ಞೆ ಅತ್ಯಂತ ಗಮನೀಯವಾದ ಅಂಶವಾಗಿದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ಹೇಳಿದರು.

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು “ಶಾರದಾಮಾತೆಯವರ ಚಿಂತನ” ಎಂಬ ವಿಷಯವಾಗಿ ವಿಶೇಷ ಪ್ರವಚನ ನೀಡುತ್ತ ಮಾತನಾಡುತ್ತಿದ್ದರು.

ಶ್ರೀಮಾತೆಯವರು ತಿಳಿಸಿದಂತೆ ಮನುಷ್ಯ ಹಣಕ್ಕೆ ಅಧೀನವಾಗದೆ ಹಣದ ವಿಷಯದಲ್ಲಿ ಜಾಗರೂಕತೆಯಿಂದ ಇರಬೇಕು ಎಂದರು.

ಸತ್ಸಂಗದ ಆರಂಭದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಭಜನೆ, ದಿವ್ಯತ್ರಯರಿಗೆ ಮಂಗಳಾರತಿ ಮತ್ತು ಅನ್ನಪ್ರಸಾದ ವಿನಿಯೋಗ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀಮತಿ ಎಂ ಗೀತಾ ನಾಗರಾಜ್, ಪಂಕಜ, ಕವಿತಾ, ಅಂಬುಜಾ, ಗೀತಾ ವೆಂಕಟೇಶರೆಡ್ಡಿ, ಅನ್ವಿಕಾ, ಮಂಜುಳ, ರಶ್ಮಿ ವಸಂತ, ಯಶಸ್ವಿ, ಭಾವನಾ, ಚೇತನ್, ಚೆನ್ನಕೇಶವ, ಯತೀಶ್ ಎಂ ಸಿದ್ದಾಪುರ ಸೇರಿದಂತೆ ಸದ್ಭಕ್ತರು ಭಾಗವಹಿಸಿದ್ದರು.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button