ಶಕ್ತಿಶಾಲೀ ವ್ಯಕ್ತಿತ್ವ ನಿರ್ಮಾಣಕ್ಕೆ ಆಧ್ಯಾತ್ಮಿಕ ಶಕ್ತಿಯೇ ಅಡಿಪಾಯ – ಯತೀಶ್.ಎಂ ಸಿದ್ದಾಪುರ.
ಚಳ್ಳಕೆರೆ ಮಾ.02

ಸಮರ್ಥ ಶಕ್ತಿಶಾಲೀ ವ್ಯಕ್ತಿತ್ವ ನಿರ್ಮಾಣದಲ್ಲಿ ಆಧ್ಯಾತ್ಮಿಕ ಶಕ್ತಿಯೇ ಭದ್ರವಾದ ಅಡಿಪಾಯ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಯತೀಶ್ ಎಂ ಸಿದ್ದಾಪುರ ತಿಳಿಸಿದರು.

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಬಾಪೂಜಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಾರ್ಥನೆ ಮತ್ತು ಭಜನೆ ನಡೆಸಿಕೊಟ್ಟ ಅವರು ಸ್ವಾಮಿ ಪುರುಷೋತ್ತಮಾನಂದಜೀ ಬರೆದಿರುವ “ಶಕ್ತಿಶಾಲೀ ವ್ಯಕ್ತಿತ್ವ ನಿರ್ಮಾಣ” ಎಂಬ ವಿಷಯವಾಗಿ ಉಪನ್ಯಾಸ ನೀಡುತ್ತಾ ಮಾತನಾಡುತ್ತಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಪೂಜ್ಯ ಮಾತಾಜೀ ತ್ಯಾಗಮಯೀ ಅವರು ವಿದ್ಯಾರ್ಥಿಗಳಿಗೆ ಧ್ಯಾನಾಭ್ಯಾಸ ಮಾಡಿಸಿ ದಿವ್ಯತ್ರಯರಿಗೆ ಮಂಗಳಾರತಿ ನಡೆಸಿ ಕೊಟ್ಟರು. ಕೊನೆಯಲ್ಲಿ “ಸಂನ್ಯಾಸಿ ಗೀತೆ”ಯ ಗಾಯನ ನಡೆಯಿತು.

ತರಗತಿಯಲ್ಲಿ ಸಂತೋಷ್, ಚೇತನ್, ಸುದೀಪ್, ಮಾನ್ಯ, ಪುಷ್ಪಲತಾ, ಲೋಹಿತ್ ಕುಮಾರ್ ಸೇರಿದಂತೆ ವಿದ್ಯಾರ್ಥಿಗಳಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

