ದಿಕ್ಕು ದಿಸೆ ಇಲ್ಲದ ಶೂನ್ಯ ಪ್ರಗತಿಯ ಬಜೆಟ್, ರಾಜ್ಯದ ಹಣಕಾಸಿನ ಮೇಲೆ ಬಹಳ ಪರಿಣಾಮ ಬೀರಲಿದೆ ಎಂದ – ಬಿಜೆಪಿ ಯುವ ಮುಖಂಡ ಸಂತೋಷಕುಮಾರ ಬಾದರಬಂಡಿ.

ಮುದ್ದೇಬಿಹಾಳ ಮಾ.07

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ದಿಕ್ಕು ದಿಸೆ ಇಲ್ಲದ ಶೂನ್ಯ ಪ್ರಗತಿಯ ಬಜೆಟ್ ಆಗಿದೆ. ರಾಜ್ಯವನ್ನು ಸಾಲದ ಶೂಲಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ. ರಾಜ್ಯದ ಹಣಕಾಸಿನ ಮೇಲೆ ಬಹಳ ದೊಡ್ಡ ಪರಿಣಾಮ ಬೀರಲಿದೆ’ ಎಂದು ಮುದ್ದೇಬಿಹಾಳ್ ಬಿಜೆಪಿ ಯುವ ಮುಖಂಡ ಸಂತೋಷಕುಮಾರ ಪ ಬಾದರಬಂಡಿ.

ನಗರದಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಕಳಪೆ ಬಜೆಟ್. ₹ 1.32 ಲಕ್ಷ ಕೋಟಿ ಸಾಲ ಮಾಡಿ, ಸುಮಾರು ₹ 25 ಸಾವಿರ ಕೋಟಿ ಹೊಸ ತೆರಿಗೆ ಹಾಕಿ ₹ 22 ಸಾವಿರ ಕೋಟಿ ಕೊರತೆ ಬಜೆಟ್ ಮಂಡನೆ ಮಾಡಿದ್ದಾರೆ.

ರಾಜ್ಯವನ್ನು 10 ರಿಂದ 15 ವರ್ಷ ಹಿಂದೆ ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ. 17 ಬಾರಿ ದಾಖಲೆಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿಯಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ’ ಎಂದರು.

‘ನೀರಾವರಿಗೆ ಕೇವಲ ₹22 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ₹ 25 ಸಾವಿರ ಕೋಟಿ ಮೀಸಲಿಡ ಬೇಕಿತ್ತು. ಆದರೆ, ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಆರೋಗ್ಯ, ಗ್ರಾಮೀಣಾಭಿವೃದ್ಧಿಗೆ ಅನುದಾನ ಕಡಿಮೆ ಇದೆ’ ಎಂದರು.

ಒಳ ಮೀಸಲಾತಿಗಾಗಿ ಹೋರಾಟ:-

‘ಒಳ ಮೀಸಲಾತಿ ವಿಚಾರದಲ್ಲಿ ಸರ್ಕಾರದ ಸಚಿವರ ನಡುವೆ ಗೊಂದಲ ಇದೆ. ಹೀಗಾಗಿ, ಪರಿಶಿಷ್ಟರ ಸಮುದಾಯಕ್ಕೆ ಅನ್ಯಾಯ ಆಗುತ್ತಿದೆ. ಒಳ ಮೀಸಲಾತಿ ಕಾನೂನು ಮಾಡಿರುವುದೇ ಸರ್ಕಾರ. ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆಗೆ ಒಪ್ಪಿಗೆ ಪಡೆದು ರಾಜ್ಯಪಾಲರ ಒಪ್ಪಿಗೆ ಪಡೆದಿದ್ದಾರೆ. ಮೀಸಲಾತಿ ಪ್ರಮಾಣವನ್ನು ಶೇ 17 ರಷ್ಟು ಮಾಡಿ ಈಗ ಅದನ್ನು ಕೊಡುವುದಿಲ್ಲ ಅಂದರೆ ಹೇಗೆ..? ಒಳ ಮೀಸಲಾತಿ ಕೊಡದಿದ್ದರೆ, ಬಿಜೆಪಿಯಿಂದ ತೀವ್ರ ಹೋರಾಟ ಮಾಡಲಾಗುವುದು’ ಎಂದು ವಾಗ್ದಾಳಿ ನಡೆಸಿದರು ಎಂದು ವರದಿಯಾಗಿದೆ.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಬಸವರಾಜ ಸಂಕನಾಳ ಮುದ್ದೇಬಿಹಾಳ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button