ದಾಸೋಹ ಮಠಕ್ಕೆ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ, ಸಿ.ಸೋಮಶೇಖರ ಭೇಟಿ – ಸ್ವಾಮೀಜಿಯಿಂದ ಸನ್ಮಾನ.

ಕಾನಮಡುಗು ಮಾ.12

ಕೂಡ್ಲಿಗಿ ತಾಲೂಕಿನ ಕಾನಮಡುಗು ಗ್ರಾಮದ ಶ್ರೀ ಶರಣಬಸವೇಶ್ವರ ಸ್ವಾಮಿ ದಾಸೋಹ ಮಠಕ್ಕೆ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ, ಸಿ.ಸೋಮಶೇಖರ ರವರು ಬುಧವಾರ ಭೇಟಿ ನೀಡಿ ಶ್ರೀ ಕ್ಷೇತ್ರನಾಥನ ದರ್ಶನ ಪಡೆದರು.

ನಂತರ, ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ, ಸಿ.ಸೋಮಶೇಖರ ರವರು ಮಾತನಾಡಿ, ಕಲ್ಯಾಣ ಕರ್ನಾಟಕದ ಹೆಬ್ಬಾಗಿಲಿನಲ್ಲಿ ಇರುವಂಥ ಕಾನಮಡುಗು ಶ್ರೀ ಶರಣಬಸವೇಶ್ವರ ದಾಸೋಹ ಮಠಕ್ಕೆ ಮೂರು ಶತಮಾನಗಳ ಇತಿಹಾಸವಿರುವ ಸಂಗತಿ ಕೇಳಿ ಸಂತೋಷವಾಯಿತು.

ಶ್ರೀಮಠದಿಂದ ಅನ್ನ ದಾಸೋಹದ ಜೊತೆಗೆ ಅಕ್ಷರ ದಾಸೋಹವನ್ನು ನೀಡುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದು ತಿಳಿಸಿದರು.ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ, ಸಿ.ಸೋಮಶೇಖರ ಅವರನ್ನು ದಾಸೋಹ ಮಠದ ವತಿಯಿಂದ ಧರ್ಮಾಧಿಕಾರಿಗಳಾದ ದಾ.ಮ ಐಮಡಿ ಶರಣಾರ್ಯರು ಸೇರಿ ಇತರರು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಬಾಪೂಜಿ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಕೆ.ಎಂ ವೀರೇಶ್, ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿ ಸೋಮಶೇಖರ ಗಾಂಜಿ, ನಿವೃತ್ತ ಶಿಕ್ಷಕ ನೀರಗಂಟಿ ಶರಣಪ್ಪ, ವಿಶ್ವನಾಥ, ಸಿದ್ದಪ್ಪ, ನಾಗರಾಜ, ಸೇರಿದಂತೆ ಇತರರಿದ್ದರು ಎಂದು ವರದಿಯಾಗಿದೆ.

ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್:ಕೆ.ಎಸ್ ವೀರೇಶ್ ಕೆ ಹೊಸಹಳ್ಳಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button