ಗುರು ಕನಕ ವಿದ್ಯಾ ಕೇಂದ್ರದಲ್ಲಿ – ಸಂಭ್ರಮದ ಶಾರದಾ ಪೂಜೆ.
ತಾಯಕನಹಳ್ಳಿ ಮಾ.14

ಕೂಡ್ಲಿಗಿ ತಾಲೂಕಿನ ತಾಯಕನಹಳ್ಳಿ ಗ್ರಾಮದ ಶ್ರೀ ಗುರು ಕನಕ ವಿದ್ಯಾ ಕೇಂದ್ರ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶಾರದಾ ಪೂಜೆ ಹಾಗೂ 2024-25 ನೇ. ಸಾಲಿನ ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು 5 ನೇ. ತರಗತಿ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ವಿಘ್ನೇಶ್ವರ ಹಾಗೂ ವಿದ್ಯಾದೇವತೆ ಶಾರದಾ ದೇವಿಯ ಭಾವ ಚಿತ್ರಕ್ಕೆ ಪೂಜೆ ಪುಷ್ಪ ನಮನ ಸಲ್ಲಿಸಿ ಅದ್ದೂರಿಯಾಗಿ ಆಚರಿಸಲಾಯಿತು.
ನಂತರ ವಾಹನ ಚಾಲಕರಿಗೆ ಹಾಗೂ ಬೋಧಕೇತರ ಸಿಬ್ಬಂದಿಯವರಿಗೆ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರು ಸುನಿತಾ ಗುರುರಾಜ್, ಸಹ ಶಿಕ್ಷಕರಾದ ಹಂಪಮ್ಮ ಪೂಜಾರ್, ಮಂಜುಳ, ಸಿ.ಆರ್ ಸುಮಿತ್ರ, ರುದ್ರಮ್ಮ, ಸರೋಜ ಸೇರಿದಂತೆ ಶಾಲಾ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್:ಕೆ.ಎಸ್ ವೀರೇಶ್ ಕೆ ಹೊಸಹಳ್ಳಿ
