ಮಾತೃಶ್ರೀ ನಾಗವೇಣಮ್ಮನವರ ಜನ್ಮ ಶತಮಾನೋತ್ಸವ ಪ್ರಯುಕ್ತ – ಮಾರ್ಚ್ 28 ರಿಂದ ನಿತ್ಯಾನ್ನದಾನ ಕಾರ್ಯಕ್ರಮ.

ಚಳ್ಳಕೆರೆ ಮಾ.26

ನಗರದ ಹೊರ ವಲಯದ ನರಹರಿ ನಗರದ ಶ್ರೀನರಹರಿ ಸೇವಾ ಪ್ರತಿಷ್ಠಾನ ಹಾಗೂ ನಾಗ ಸಿಂಹಾದ್ರಿ ಚಾರಿಟೀಸ್ ನ ಸಹಯೋಗದಲ್ಲಿ ಮಾತೃಶ್ರೀ ನಾಗವೇಣಮ್ಮನವರ ಜನ್ಮ ಶತಮಾನೋತ್ಸವದ ಸಂಭ್ರಮದ ಪ್ರಯುಕ್ತ ನರಹರಿ ನಗರದ ಶ್ರೀನರಹರಿ ಸದ್ಗುರು ಆಶ್ರಮದಲ್ಲಿ ಪ್ರತಿನಿತ್ಯ ಅನ್ನದಾಸೋಹ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮದ ಉದ್ಘಾಟನೆಯು ಮಾರ್ಚ್ 28 ರ ಶನಿವಾರ ಬೆಳಗ್ಗೆ 10:30 ರಿಂದ 2 ಗಂಟೆಯ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ನಿತ್ಯಾನ್ನ ದಾಸೋಹ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದ್ದು ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಐ.ಐ.ಎಂ‌ ನ ನಿವೃತ್ತ ಪ್ರೊಫೆಸರ್ ಡಾ, ಬಿ.ಶೇಖರ್, ಶ್ರೀನರಹರಿ ಸದ್ಗುರು ಆಶ್ರಮದ ಉಪಾಧ್ಯಕ್ಷರಾದ ಮಾಕಂ ಶ್ರೀನಿವಾಸಲು, ಬೆಂಗಳೂರಿನ ಪ್ರಗತಿಪರ ಬೇಸಾಯ ಗಾರರಾದ ಕುಂಕಲ ಕೃಷ್ಣಯ್ಯ ಭಾಗವಹಿಸಲಿದ್ದಾರೆ ಎಂದು ಶ್ರೀನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಡಾ, ವೈ ರಾಜಾರಾಮ್ ಗುರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button