ಶಾರದಾಮಾತೆಯವರು ಎಲ್ಲರ ನಿಜವಾದ ತಾಯಿ – ಶ್ರೀಮತಿ ಜಿ ಯಶೋಧಾ ಪ್ರಕಾಶ್.
ಚಳ್ಳಕೆರೆ ಮಾ.26

ಶ್ರೀಮಾತೆ ಶಾರದಾದೇವಿಯವರು ಜಗತ್ತಿನ ಎಲ್ಲ ಜನರ ನಿಜವಾದ ತಾಯಿಯಾಗಿದ್ದರು ಎಂದು ಚಳ್ಳಕೆರೆಯ ಶಿವನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ತಿಳಿಸಿದರು.

ನಗರದ ಶಿವ ನಗರದ ತಮ್ಮ ಜಿ.ವಿ.ಎಸ್.ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ ಮಾತನಾಡುತ್ತಿದ್ದರು.

ಸತ್ಸಂಗದ ಪ್ರಯುಕ್ತ ಯತೀಶ್ ಎಂ ಸಿದ್ದಾಪುರ ಅವರ ನೇತೃತ್ವದಲ್ಲಿ ವಿಶೇಷ ಭಜನೆ, ಶ್ರೀಮದ್ ಭಗವದ್ಗೀತೆಯ ಶ್ಲೋಕಗಳ ಕಲಿಕಾ ತರಗತಿ, ಪ್ರಸಾದ ವಿನಿಯೋಗ ನಡೆಯಿತು.

ಕಾರ್ಯಕ್ರಮದಲ್ಲಿ ಜಯಮ್ಮ, ಸುಧಾಮಣಿ, ಸೌಮ್ಯ ಪ್ರಸಾದ್, ಶೈಲಜಾ, ಕೃಷ್ಣವೇಣಿ, ವಿಜಯಲಕ್ಷ್ಮೀ, ರಶ್ಮಿ ರಮೇಶ್, ಸರಸ್ವತಿ ರಾಜು, ವೀರಮ್ಮ, ನಾಗರತ್ನಮ್ಮ ಉಪಸ್ಥಿತರಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

