ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ – ಯಶಸ್ವಿಯಾಗಿ ಜರುಗಿತು.
ನಿಂಬಲಗುಂದಿ ಮಾ.27

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಐಹೊಳೆ ವಲಯದ ನಿಂಬಲ್ಗುಂದಿ ಕಾರ್ಯ ಕ್ಷೇತ್ರದಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಾತೃ ಹೃದಯ ಅಮ್ಮನವರ ಕನಸಿನ ಕೂಸಾದ ಜ್ಞಾನ ವಿಕಾಸ ವಾತ್ಸಲ್ಯ ಕಾರ್ಯಕ್ರಮದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಹಮ್ಮಿಕೊಂಡಿದ್ದು.

ಈ ಕಾರ್ಯಕ್ರಮದಲ್ಲಿ ಊರಿನ ಗಣ್ಯರಾದ ಬಸವರಾಜ್ ನರಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ಮಾನ್ಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರು. ಮತ್ತು ತಾಲೂಕು ಯೋಜನಾಧಿಕಾರಿಯಾದಂತ ಸಂತೋಷ ರವರು ಜನಜಾಗೃತಿ ಸದಸ್ಯರಾದ ಕೃಷ್ಣ ರಾಮದುರ್ಗ ಊರಿನ ಗಣ್ಯರ ಸಮ್ಮುಖದಲ್ಲಿ ಸಂಘದವರ ರಿಬ್ಬನ್ ಕಟ್ ಮಾಡುವುದರ ಮೂಲಕ ದೀಪ ಉದ್ಘಾಟನೆ ಮಾಡಿ ವಾತ್ಸಲ್ಯ ಮನೆಯನ್ನು ಹಸ್ತಾಂತರ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾನ್ಯ ಜಿಲ್ಲಾ ನಿರ್ದೇಶಕರು ಯೋಜನೆಯಲ್ಲಿ ಇರುವ ಸೇವೆಗಳ ಬಗ್ಗೆ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ವಿಸ್ತಾರವಾಗಿ ಮಾತನಾಡಿದರು ಜನಜಾಗೃತಿ ಸದಸ್ಯರಾದ ಕೃಷ್ಣರಾಮ ದುರ್ಗಾವರು ಪೂಜ್ಯರು ಮಾಡುವ ಸೇವೆಗಳ ಬಗ್ಗೆ ಮತ್ತು ಯೋಜನೆ ಮಾಡುವ ಸಮಾಜ ಮುಖಿ ಕೆಲಸಗಳ ಬಗ್ಗೆ ಕ್ಷೇತ್ರದ ನಾಲ್ಕು ದಾನಗಳ ಬಗ್ಗೆ ಮಾತನಾಡಿ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿ ಮತ್ತು ವಲಯದ ಮೇಲ್ವಿಚಾರಕರು ಊರಿನ ಗುರು ಹಿರಿಯರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.

