ಮಹಿಳೆಯರಿಗೆ ಸಮಾನ ಅವಕಾಶಗಳು ದೊರೆಯ ಬೇಕು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕದಳಿ ವೇದಿಕೆಯ – ಜಿಲ್ಲಾಧ್ಯಕ್ಷರಾದ ಇಂದುಮತಿ ತಿಪ್ಪೇಸ್ವಾಮಿ ಅವರಿಂದ ಆಗ್ರಹ.
ಕೂಡ್ಲಿಗಿ ಮಾ.31

ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ ಚಿತ್ರದುರ್ಗ ಶರಣ ಸಾಹಿತ್ಯ ಪರಿಷತ್ತು ಕದಳಿ ವೇದಿಕೆ ಕೂಡ್ಲಿಗಿ ತುಳಸಿ ಗೆಳೆತಿಯರ ಬಳಗ ಸಕಲಾ ಪುರದಹಟ್ಟಿ ಇವರ ಸಹಯೋಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನ ಹಾಗೂ ಮಹಿಳೆಯರಿಗೆ ಆಟೋಟ ಸ್ಪರ್ಧೆ ವಚನ ಗಾಯನ ಹಾಗೂ ಸಾಂಸ್ಕೃತಿ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕದಳಿ ವೇದಿಕೆಯ ಅಧ್ಯಕ್ಷರಾದ ಇಂದುಮತಿ ತಿಪ್ಪೇಸ್ವಾಮಿ ಮಾತನಾಡಿ, ಮಹಿಳಾ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಮಹಿಳೆಯರು ಕುಟುಂಬ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಅವರಿಗೆ ಸಮಾನ ಅವಕಾಶಗಳು ದೊರೆಯ ಬೇಕು ಎಂದರು.
ಉದ್ಘಾಟಕರಾದ ಎನ್.ಎಮ್ ರವಿಕುಮಾರ್ ಮಾತನಾಡಿ ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದು. ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಸಮಾಜಕ್ಕೆ ಹೆಮ್ಮೆ ತಂದಿದೆ ಎಂದು ಹೇಳಿದರು.
ಮಹಿಳೆಯರಿಗೆ ಆತ್ಮವಿಶ್ವಾಸ ಹಾಗೂ ಆರೋಗ್ಯದ ಮಹತ್ವವನ್ನು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಯಾ ಪುತ್ತೂರ್ಕರ್ ಮಾತನಾಡಿ ಮಹಿಳೆಯರ ಶಕ್ತೀಕರಣ ಹಾಗೂ ಅವರ ಸಾಧನೆಗಳನ್ನು ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಿವಿಧ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಹಿಳೆಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಇದೇ ವೇಳೆ ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಸಾಮಸಂಗಮೇಶ್ವರಯ್ಯ, ಡಾ, ಗೌರಮ್ಮ ನಿವೃತ್ತ ಪ್ರಾಂಶುಪಾಲರು, ಸತೀಶ್ ಕುಮಾರ್, ಗೌರಮ್ಮ, ತಿಪ್ಪಮ್ಮ ನಾಗರಾಜ್, ಲಕ್ಷ್ಮಿ, ಶರಣ ಸಾಹಿತ್ಯ ಪರಿಷತ್ತು ತಾಲೂಕು ಕದಳಿ ವೇದಿಕೆಯ ಅಧ್ಯಕ್ಷರಾದ ತಿಪ್ಪೀರಮ್ಮ ಸಕಲಪುರದ ಹಟ್ಟಿ , ಡಾ, ಉಮಾದೇವಿ ಹಿರೇ ಕುಂಬಳಗುಂಟೆ, ನಾಗರಾಜ ವಲಯ ಮೇಲ್ವಿಚಾರಕರು ಧರ್ಮಸ್ಥಳ ಸಂಘ ಹೊಸಹಳ್ಳಿ, ನಿರ್ಮಲ ಭಾರದ್ವಾಜ್, ಶಿವರುದ್ರಪ್ಪ ಪಂಡ್ರಳ್ಳಿ, ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ಥಳೀಯ ಮಹಿಳೆಯರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು ಎಂದು ವರದಿಯಾಗಿದೆ.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್ ವೀರೇಶ್ ಕೆ ಹೊಸಹಳ್ಳಿ

