2026 ನೇ. ಸಾಲಿನ ಪ್ರತಿಷ್ಠಿತ ಕರ್ನಾಟಕ ಯೂಥ್ ಐಕಾನ್ ಪ್ರಶಸ್ತಿಗೆ – ಮಂಜುನಾಥ ಚೆಲುವಾಗಿ (ದೊಡ್ಡಮನಿ) ಆಯ್ಕೆ.
ಬಸರಕೋಡ ಏ.05

ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಉದಯೋನ್ಮುಖ ಯುವ ನಾಯಕ ಹಾಗೂ ಸಮಾಜ ಸೇವಕ ಮಂಜುನಾಥ್ ಚಲವಾದಿ (ದೊಡ್ಡಮನಿ) ಅವರು 2026 ನೇ. ಸಾಲಿನ ಪ್ರತಿಷ್ಠಿತ ಕರ್ನಾಟಕ ಯೂಥ್ ಐಕಾನ್ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ.
ಬೆಂಗಳೂರಿನ ಪ್ರಗತಿ ಮೀಡಿಯಾ ಇವೆಂಟ್ಸ್ ಸಂಸ್ಥೆಯು ರಾಜಕೀಯ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಮಂಜುನಾಥ ಅವರು ಗಣನೀಯ ಸಾಧನೆಯನ್ನು ಗುರುತಿಸಿ ಈ ಗೌರವಕ್ಕೆ ಆಯ್ಕೆ ಮಾಡಿದೆ.
ಇದೇ ತಿಂಗಳು ಬೆಂಗಳೂರಿನಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ರಾಜ್ಯ ಸಮಾಜ ಕಲ್ಯಾಣ ಸಚಿವರಾದ ಮಾನ್ಯ ಹೆಚ್.ಸಿ ಮಹಾದೇವಪ್ಪ ಹಾಗೂ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾದ ಮಾನ್ಯ, ಕೆ.ಎಸ್ ಈಶ್ವರಪ್ಪ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ವಿಜಯಪುರ ಜಿಲ್ಲೆಯಾದ್ಯಂತ ಸಮಾಜ ಮುಖಿ ಕಾರ್ಯ ಚಟುವಟಿಕೆಗಳಲ್ಲಿ ಸದಾ ಮುಂಚೂಣಿ ಯಲ್ಲಿರುವ ಮಂಜುನಾಥ ಚಲವಾದಿಯವರು, ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಜನಾನುರಾಗಿದ್ದಾರೆ.
ಇವರ ಕ್ರೀಯಾಶೀಲ ನಾಯಕತ್ವ ಗುಣ ಮತ್ತು ಸಮಾಜ ಸೇವೆಯನ್ನು ಮೆಚ್ಚಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಬಸವರಾಜ ಸಂಕನಾಳ ಮುದ್ದೇಬಿಹಾಳ

