ಸಂನ್ಯಾಸಿಗಳು ಉನ್ನತ ಮಟ್ಟದ ಆದರ್ಶವನ್ನು ಹೊಂದಿರ ಬೇಕು – ಶ್ರೀಮತಿ ಜಿ.ಯಶೋಧಾ ಪ್ರಕಾಶ್.

ಚಳ್ಳಕೆರೆ ಏ.07

ಶ್ರೀಮಾತೆ ಶಾರದಾದೇವಿಯವರು ತಿಳಿಸಿದಂತೆ ಸಂನ್ಯಾಸಿಗಳಾದವರು ಉನ್ನತ ಮಟ್ಟದ ಆದರ್ಶವನ್ನು ಹೊಂದಿರಬೇಕು ಎಂದು ಚಳ್ಳಕೆರೆಯ ಶಿವನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ತಿಳಿಸಿದರು.

ಶಿವ ನಗರದ ತಮ್ಮ ಜಿ.ವಿ.ಎಸ್ ನಿವಾಸದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥದ “ಮುನ್ನಡೆಸುವ ಮಹಾಶಕ್ತಿ” ಎಂಬ ಅಧ್ಯಾಯವನ್ನು ಪಾರಾಯಣ ಮಾಡುತ್ತ ಮಾತನಾಡುತ್ತಿದ್ದರು.

ಸತ್ಸಂಗದ ಆರಂಭದಲ್ಲಿ ಸದ್ಭಕ್ತರಿಂದ ಸಾಮೂಹಿಕ ಭಜನೆ, ಶ್ರೀಮದ್ ಭಗವದ್ಗೀತೆಯ ಶ್ಲೋಕಗಳ ಕಲಿಕಾ ತರಗತಿ ಕಾರ್ಯಕ್ರಮ ನಡೆಯಿತು‌.

ಸತ್ಸಂಗ ಸಭೆಯಲ್ಲಿ ಶ್ರೀಮತಿ ಶಾಂತಮ್ಮ, ಗೀತಾಲಕ್ಷ್ಮೀ, ಸೌಮ್ಯ ಪ್ರಸಾದ್, ವೀರಮ್ಮ, ರಶ್ಮಿ ರಮೇಶ್, ವಿಜಯಲಕ್ಷ್ಮೀ, ಶೈಲಜಾ,ಪಿ.ಎಸ್.ಮಾಣಿಕ್ಯ ಸತ್ಯನಾರಾಯಣ, ಕವಿತಾ, ಯತೀಶ್ ಎಂ ಸಿದ್ದಾಪುರ, ಭಾಗ್ಯಲಕ್ಷ್ಮೀ, ನಿಖಿಲೇಶ್ ಯಾದವ್ ಪಾಲ್ಗೊಂಡಿದ್ದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button