ದಾವಣಗೆರೆ ಉಪ ಚುನಾವಣೆ ಉಸ್ತುವಾರಿ ಕೆ.ಪಿ.ಸಿ.ಸಿ ಮಾಧ್ಯಮ ವಕ್ತಾರ – ಪರಶುರಾಮ್ ಕೆರೆಹಳ್ಳಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿ ಮತ ಯಾಚಿಸಿದರು.

ಕೊಪ್ಪಳ ಏ.08

ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅಲ್ಲಿನ ಪ್ರತಿ ವಾರ್ಡ್ ಗಳಲ್ಲಿ ಗಾಂಧಿ ನಗರ, ಅಂಬೇಡ್ಕರ್ ನಗರ, ಕಾಲೋನಿಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ ಎಸ್.ಸಿ ಘಟಕದ ಕೆ.ಪಿ.ಸಿ.ಸಿ ಮಾಧ್ಯಮ ವಕ್ತಾರ ಹಾಗೂ ಎಸ್.ಸಿ ಘಟಕದ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಪರಶುರಾಮ್ ಕೆರೆಹಳ್ಳಿ ಭಾಗಿ.

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಶಿವಶಂಕರಪ್ಪ ಅವರ ಪರವಾಗಿ ಪ್ರತಿ ವಾರ್ಡ್ ಗಾಂಧಿ ನಗರ, ಅಂಬೇಡ್ಕರ್ ನಗರ, ದುರ್ಗಮ್ಮ ಗುಡಿ, ಆಂಜನೇಯ ಬಡಾವಣೆ, ಕಾಲೋನಿಗಳಲ್ಲಿ ಮನೆ ಮನೆಗೆ ತೆರಳಿ ಪುರುಷರಲ್ಲಿ, ಯುವಕರಲ್ಲಿ, ಮಹಿಳೆಯರಲ್ಲಿ, ಮತಯಾಚನೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಪರಶುರಾಮ್ ಕೆರೆಹಳ್ಳಿ ಮಾತನಾಡಿ ಶಾಮನೂರು ಶಿವಶಂಕರಪ್ಪನವರು ಸದಾ ಜನರ ಮಧ್ಯೆ ಇದ್ದು ಕೊಂಡು ದಾವಣಗೆರೆ ದಕ್ಷಿಣ ವಿಧಾನ ಸಭಾ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ.

ಜನರ ಸಮಸ್ಯೆಗಳಿಗೆ ಧ್ವನಿಯಾಗಿ, ಬಡವರ, ಕಾರ್ಮಿಕರ, ರೈತರ, ಹಿಂದುಳಿದ, ದಲಿತ ಅಲ್ಪಸಂಖ್ಯಾತ ಸಮುದಾಯದ ಏಳಿಗೆಗಾಗಿ ಶ್ರಮಿಸಿದ್ದಾರೆ. ದಾವಣಗೆರೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗನಾದ ಸಮರ್ಥ್ ಮಲ್ಲಿಕಾರ್ಜುನ್ ಶಾಮನೂರು ಅವರು ಖಂಡಿತ ಜಯ ಶೀಲರಾಗುತ್ತಾರೆಂದು ವಿಶ್ವಾಸ ಇದೆ ಎಂದು ಪತ್ರಿಕಾ ಪ್ರಕಟಿನಲ್ಲಿ ತಿಳಿಸಿದ್ದಾರೆ.

ದಾವಣಗೆರೆ ಉಪ ಚುನಾವಣೆ ಕಾರ್ಯಕ್ರಮದ ಪ್ರಚಾರಕ್ಕಾಗಿ ಉಸ್ತುವಾರಿಯನ್ನಾಗಿ ನೇಮಿಸಿ ಆದೇಶ ಮಾಡಿದ ರಾಜ್ಯದ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ನವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ ಹಾಗೂ ಎಸ್.ಸಿ ಘಟಕದ ರಾಜ್ಯಾಧ್ಯಕ್ಷರಾದ ಆರ್ ಧರ್ಮ ಸೇನಾರವರು, ನನಗೆ ಸಹಕಾರ ನೀಡಿದ.

ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ.ಎಸ್ ತಂಗಡಗಿ ರಾಯರೆಡ್ಡಿ ಯವರು ಮತ್ತು ಕೊಪ್ಪಳ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಕೆ.ರಾಘವೇಂದ್ರ ಹಿಟ್ನಾಳ್ ಜನಪ್ರಿಯ ಸಂಸದರಾದ ಕೆ.ರಾಜಶೇಖರ್ ಹಿಟ್ನಾಳ್ ಮಾಜಿ ಸಂಸದರಾದ ಸಂಗಣ್ಣ ಕರಡಿ ರವರು ಹಾಗೂ ಸಹಕಾರ ಮಾರ್ಗದರ್ಶನ ನೀಡಿದ, ಎಸ್.ಸಿ ಘಟಕದ ಜಿಲ್ಲಾಧ್ಯಕ್ಷರಾದ ಗಾಳೆಪ್ಪ ಎಚ್ ಪೂಜಾರ್ ರವರು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಗೂಳಪ್ಪ ಹಲಗೇರಿ ರವರು, ಕೊಪ್ಪಳ ನಗರ ಸಭೆ ಮಾಜಿ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರು ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ವರಿಷ್ಠರಿಗೂ, ಹಿರಿಯ ಕಾಂಗ್ರೆಸ್ ಮುಖಂಡರು, ಯುವ ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಪಕ್ಷದ ಎಲ್ಲಾ ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಎಸ್.ಸಿ ಘಟಕದ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು. ಇವರೆಲ್ಲರಿಗೂ ವೈಯಕ್ತಿಕವಾಗಿ ಮಾಧ್ಯಮದ ಮೂಲಕ ತುಂಬು ಹೃದಯದ ಧನ್ಯವಾದಗಳು ತಿಳಿಸಿದ್ದಾರೆ.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ರಾಘವೇಂದ್ರ.ಬಿ ಸಾಲುಮನೆ ಕೂಡ್ಲಿಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button