ಶ್ರೀಶಾರದಾಶ್ರಮದಲ್ಲಿ ಮಕ್ಕಳಿಗಾಗಿ ಭಜನಾ – ಕಲಿಕಾ ಕಾರ್ಯಕ್ರಮ.
ಚಳ್ಳಕೆರೆ ಏ.21

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ ವಾರದ “ವಿವೇಕ ವಿಹಾರ ವಿದ್ಯಾರ್ಥಿ ಶಿಬಿರ” ದಲ್ಲಿ ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ವಿಶೇಷ ಭಜನೆಗಳ ಕಲಿಕಾ ಕಾರ್ಯಕ್ರಮ ನಡೆಯಿತು.

ಯತೀಶ್.ಎಂ ಸಿದ್ದಾಪುರ ಅವರಿಂದ ಭಜನೆ.
ತರಗತಿಯ ಪ್ರಯುಕ್ತ ಮಕ್ಕಳಿಂದ ಓಂಕಾರ, ದಿವ್ಯತ್ರಯರ ಪ್ರಣಾಮಮಂತ್ರ, ಶ್ರೀರಾಮಕೃಷ್ಣರ ನಾಮಸ್ಮರಣೆ, ಸ್ವಾಮಿ ವಿವೇಕಾನಂದರ ಶಕ್ತಿಮಂತ್ರ, ಸ್ವದೇಶ ಮಂತ್ರ, ಚೈತನ್ಯದಾಯಕ ನುಡಿಗಳ ಪಠಣ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀಮತಿ ಸುಧಾಮಣಿ, ಚೇತನ್ ಕುಮಾರ್, ಮಾನ್ಯ, ಚರಣ್ಯ, ಸಹನಾ, ವಿವಿಕ್ತ, ಇಂದು, ಚಿರಣ್ಯ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

