ಬ್ರೇಕಿಂಗ್ ನ್ಯೂಸ್🚨ಉಡುಪಿ ಜಿಲ್ಲಾ ಪೊಲೀಸ್ ಕಚೇರಿಗೆ ಡಿ.ಜಿ.ಪಿ ಡಾ, ಎಂ.ಎ ಸಲೀಂ ಭೇಟಿ – ಅಧಿಕಾರಿಗಳೊಂದಿಗೆ ಮಹತ್ವದ ಸಭೆ.

ಉಡುಪಿ ಏ.22

ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿ.ಜಿ.ಪಿ) ಡಾ, ಎಂ.ಎ ಸಲೀಂ, ಐ.ಪಿ.ಎಸ್ ಅವರು ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಅಧಿಕೃತ ಭೇಟಿ ನೀಡಿ, ಜಿಲ್ಲೆಯ ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸ್ ಕಾರ್ಯ ವೈಖರಿಯನ್ನು ಪರಿಶೀಲಿಸಿದರು.ಕಚೇರಿಗೆ ಆಗಮಿಸಿದ ಡಿ.ಜಿ.ಪಿ ಅವರಿಗೆ ಪೊಲೀಸ್ ಇಲಾಖೆಯ ವತಿಯಿಂದ ಗೌರವ ವಂದನೆ ಸಲ್ಲಿಸಲಾಯಿತು.

ನಂತರ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಅವರು, ಈ ಕೆಳಗಿನ ಪ್ರಮುಖ ಅಂಶಗಳ ಕುರಿತು ಚರ್ಚಿಸಿ ಸೂಕ್ತ ಮಾರ್ಗದರ್ಶನ ನೀಡಿದರು.

ಕಾನೂನು ಸುವ್ಯವಸ್ಥೆ ಪರಿಶೀಲನೆ:-

ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ತನಿಖಾ ಪ್ರಗತಿ:-

ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿ ಹಾಗೂ ಅಪರಾಧ ತಡೆ ಗಟ್ಟಲು ನವೀನ ತಂತ್ರಜ್ಞಾನದ ಬಳಕೆ ಬಗ್ಗೆ ಸೂಚನೆ ನೀಡಿದರು.

ಸಾರ್ವಜನಿಕ ಸ್ನೇಹಿ ಪೊಲೀಸಿಂಗ್:-

ಜನ ಸಾಮಾನ್ಯರ ದೂರುಗಳಿಗೆ ತಕ್ಷಣ ಸ್ಪಂದಿಸಿ, ಪೊಲೀಸ್ ಠಾಣೆಗಳನ್ನು ಸಾರ್ವಜನಿಕ ಸ್ನೇಹಿಯಾಗಿ ರೂಪಿಸುವಂತೆ ಅಧಿಕಾರಿಗಳಿಗೆ ಕರೆ ನೀಡಿದರು.

ಸುರಕ್ಷತಾ ಕ್ರಮಗಳು:-

ಜಿಲ್ಲೆಯ ಕರಾವಳಿ ಭಾಗದ ಭದ್ರತೆ ಹಾಗೂ ಸಂಚಾರ ನಿಯಮಗಳ ಕಟ್ಟು ನಿಟ್ಟಿನ ಜಾರಿ ಬಗ್ಗೆ ವಿಶೇಷ ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಡಿಜಿಪಿ ಅವರ ಈ ಭೇಟಿಯು ಜಿಲ್ಲಾ ಪೊಲೀಸ್ ಪಡೆಯಲ್ಲಿ ಹೊಸ ಚೈತನ್ಯ ತುಂಬಿದೆ.

ವರದಿ:ಆರತಿ.ಗಿಳಿಯಾರು.ಉಡುಪಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button