ಸಂನ್ಯಾಸಿಗಳು ಮಾನ-ಅಪಮಾನಗಳನ್ನು ಮೀರಿ ಆಧ್ಯಾತ್ಮಿಕ ಜೀವನ ನಡೆಸಬೇಕು – ಶ್ರೀಮತಿ ಜಿ.ಯಶೋಧಾ ಪ್ರಕಾಶ್.
ಚಳ್ಳಕೆರೆ ಮೇ.13

ಭಾರತೀಯ ಸನಾತನ ಪರಂಪರೆಯಲ್ಲಿ ಸಂನ್ಯಾಸ ಜೀವನಕ್ಕೆ ಬಹಳ ಪ್ರಾಧಾನ್ಯತೆಯನ್ನು ನೀಡಲಾಗಿದ್ದು ಸಂನ್ಯಾಸಿಗಳಾದವರು ಮಾನ-ಅಪಮಾನಗಳನ್ನು ಮೀರಿ ತ್ಯಾಗಭರಿತ ಆದರ್ಶ ಆಧ್ಯಾತ್ಮಿಕ ಜೀವನ ನಡೆಸಬೇಕು ಎಂದು ಚಳ್ಳಕೆರೆಯ ಶಿವ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಜಿ ಯಶೋಧಾ ಪ್ರಕಾಶ್ ತಿಳಿಸಿದರು.

ಶಿವನ ಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು “ಶ್ರೀಶಾರದಾದೇವಿ ಜೀವನಗಂಗಾ” ಗ್ರಂಥ ಪಾರಾಯಣ ಮಾಡುತ್ತ “ಮುನ್ನಡೆಸುವ ಮಹಾಶಕ್ತಿ” ಎಂಬ ಅಧ್ಯಾಯವನ್ನು ಓದುತ್ತಾ ಮಾತನಾಡಿದರು.

ಸತ್ಸಂಗದ ಪ್ರಯುಕ್ತ ಸದ್ಭಕ್ತರಿಂದ ಸಾಮೂಹಿಕ ಶ್ರೀರಾಮಕೃಷ್ಣರ ನಾಮಸ್ಮರಣೆ, ಏಕಾದಶಿಯ ಪ್ರಯುಕ್ತ ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ಶ್ರೀರಾಮನ ವಿಶೇಷ ಭಜನೆ, ಶ್ರೀಮದ್ ಭಗವದ್ಗೀತೆಯ ಶ್ಲೋಕಗಳ ಕಲಿಕಾ ತರಗತಿ ನಡೆಯಿತು.

ಸತ್ಸಂಗ ಸಭೆಯಲ್ಲಿ ಶ್ರೀಮತಿ ಸರಸ್ವತಮ್ಮ, ವಿಜಯಲಕ್ಷ್ಮೀ, ಭ್ರಮರಂಬಾ, ವೀರಮ್ಮ, ಕೃಷ್ಣವೇಣಿ, ಸಂಗೀತ, ಗೀತಾಲಕ್ಷ್ಮೀ, ಶಾರದಮ್ಮ, ನಾಗರತ್ನಮ್ಮ, ಭಾಗ್ಯಲಕ್ಷ್ಮೀ ಸೇರಿದಂತೆ ಸದ್ಭಕ್ತರು ಭಾಗವಹಿಸಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

