ಗಿಡ ನೆಡುವ ಮೂಲಕ ಮಗಳ – ಹುಟ್ಟು ಹಬ್ಬ ಆಚರಣೆ.

ಅಂಕಸಮುದ್ರ ಮೇ.22

ಹಗರಿಬೊಮ್ಮನಹಳ್ಳಿ ತಾಲೂಕಿನ ಅಂಕಸಮುದ್ರ ಗ್ರಾಮದ ಪಕ್ಷಿ ಧಾಮದಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಉಪ ವಲಯ ಅರಣ್ಯಾಧಿಕಾರಿಗಳು ತಮ್ಮ ಮಗಳ ಹುಟ್ಟು ಹಬ್ಬವನ್ನು ಗಿಡಗಳನ್ನು ನೆಡುವ ಮೂಲಕ ಸರಳ ಹಾಗೂ ಅರ್ಥ ಪೂರ್ಣವಾಗಿ ಆಚರಿಸಿ ಕೊಂಡರು.

ಉಪ ವಲಯ ಅರಣ್ಯಾಧಿಕಾರಿಗಳ ಕುಟುಂಬದವರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ವಿವಿಧ ಜಾತಿಯ ನೇರಳೆ, ಸಿಹಿಹುಣಸೆ, ಸೀತಾಫಲ, ಬೆಟ್ಟದನೆಲ್ಲಿ, ಅತ್ತಿ ಗಿಡಗಳನ್ನು ನಾಟಿ ಮಾಡಲಾಯಿತು. ಜಾತಿಯ ಸಸಿಗಳನ್ನು ನೆಟ್ಟು ಪರಿಸರ ಉಳಿವಿನ ಮಹತ್ವವನ್ನು ಸಾರಿದರು.

ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ಕೆ. ಎಂ. ಮಧುಸೂಧನ್ ಮಾತನಾಡಿದ ಅವರು, ಪ್ರತಿಯೊಬ್ಬರೂ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವ ಸೇರಿದಂತೆ ವಿಶೇಷ ದಿನಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಕೈ ಜೋಡಿಸ ಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಈ ಕಾರ್ಯವನ್ನು ಮೆಚ್ಚಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಗಿಡಗಳನ್ನು ಬೆಳೆಸಿ ಹಸಿರು ಪರಿಸರ ನಿರ್ಮಾಣಕ್ಕೆ ಸಹಕರಿಸುವುದಾಗಿ ತಿಳಿಸಿದರು.

ಇದೇ ವೇಳೆ ಉಪ ವಲಯ ಅರಣ್ಯಾಧಿಕಾರಿ ಕೆ. ಎಂ. ಮಧುಸೂಧನ್, ಡಿ. ಆರ್ ಮಂಜುಳಾ, ಮಗಳು ಸಮಂತಾ, ಬೇಬಿ ಸಂಭ್ರಮ, ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಎಂ.ಮಂಜುನಾಥ್ ಗಸ್ತು ಅರಣ್ಯ ಪಾಲಕ, ಅರಣ್ಯ ವೀಕ್ಷಕರಾದ ಮಲ್ಲಿಕಾರ್ಜುನ ಸ್ವಾಮಿ, ಮಂಜುನಾಥ್, ರಾಜು, ಲವ ಇದ್ದರು.

ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್ ವೀರೇಶ್ ಕೆ ಹೊಸಹಳ್ಳಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button