ವಸತಿ ರಹಿತ & ನಿವೇಶನ ರಹಿತರ ಸಮೀಕ್ಷೆಯ ಪಟ್ಟಿಗೆ ಸೇರ್ಪಡೆಗೆ – ಮೇ 30 ರ ಕೊನೆಯ ದಿನ.

ಕೂಡ್ಲಿಗಿ ಮೇ.23

ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳ 2018 ರ ವಸತಿ ರಹಿತ ಮತ್ತು ನಿವೇಶನ ರಹಿತ ಸಮೀಕ್ಷೆಯ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಅರ್ಹ ಫಲಾನುಭವಿಗಳನ್ನು ಸೇರಿಸಲು ಹಾಗೂ ಪರಿಷ್ಕರಿಸಲು ಮೇ 30 ರ ಕೊನೆಯ ದಿನವಾಗಿದೆ ಎಂದು ಕೂಡ್ಲಿಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನರಸಪ್ಪ ಅವರು ತಿಳಿಸಿದ್ದಾರೆ.

2018 ರಲ್ಲಿ ನಡೆಸಲಾದ ಸಮೀಕ್ಷಾ ಪಟ್ಟಿಯನ್ನು ಪರಿಷ್ಕರಿಸಲು ಮತ್ತು ಅರ್ಹ ಕುಟುಂಬಗಳನ್ನು ಪಟ್ಟಿಗೆ ಸೇರಿಸಲು ಈಗ ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳ ಹೆಸರನ್ನು ಸೇರಿಸಲು ಮೇ 30 ರವರೆಗೆ ಅಂತಿಮ ಕಾಲಾವಕಾಶ ನೀಡಲಾಗಿದೆ.

ಈ ನಿಗದಿತ ದಿನಾಂಕದ ನಂತರ ಯಾವುದೇ ಸೇರ್ಪಡೆಗೆ ಅವಕಾಶವಿರುವುದಿಲ್ಲ ಮತ್ತು ಅಂದೇ ಪಟ್ಟಿಯನ್ನು ಅಂತಿಮ ಗೊಳಿಸಲಾಗುವುದು. ಮೇ 30 ರ ನಂತರ ಸಿದ್ಧವಾಗುವ ಪಟ್ಟಿಯನ್ನೇ ಅಂತಿಮ ‘ವಸತಿ ಮತ್ತು ನಿವೇಶನ ರಹಿತರ ಪಟ್ಟಿ’ ಎಂದು ಪರಿಗಣಿಸಲಾಗುವುದು.

ಅರ್ಹ ಫಲಾನುಭವಿಗಳು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಥವಾ ಹೆಸರು ಸೇರ್ಪಡೆಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿ ಸಿಬ್ಬಂದಿಯನ್ನು ಕೂಡಲೇ ಸಂಪರ್ಕಿಸ ಬಹುದಾಗಿದೆ.

ವಸತಿ ಸೌಲಭ್ಯದಿಂದ ವಂಚಿತರಾದ ಅರ್ಹ ಕುಟುಂಬಗಳು ರೇಷನ್ ಕಾರ್ಡ್, ಆಧಾರ್ ಕಾರ್ಡ್, ವೋಟರ್ ಐಡಿ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕ, ಫಲಾನುಭವಿ ಫೋಟೋ ಈ ಕೂಡಲೇ ಸಂಬಂಧಪಟ್ಟ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ತಮ್ಮ ಹೆಸರು ಪಟ್ಟಿಯಲ್ಲಿದೆಯೇ ಎಂದು ಖಚಿತಪಡಿಸಿ ಕೊಳ್ಳಬೇಕು.

ಅರ್ಹ ಫಲಾನುಭವಿಗಳನ್ನು ಕೈ ಬಿಟ್ಟಿದ್ದಲ್ಲಿ ಸಂಬಂಧಿಸಿದ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್ ವೀರೇಶ್ ಕೆ ಹೊಸಹಳ್ಳಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button