ಯುವ ಸಾಹಿತಿ ಶ್ರೀ ಮುತ್ತು ವಡ್ಡರ ರಾಜ್ಯ ಮಟ್ಟದ – ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ.
ಹಿರೇಮಳಗಾವಿ ಮೇ.23

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬಾಗಲಕೋಟೆ ಹಾಗೂ ಕರುನಾಡು ಕಲ್ಪವೃಕ್ಷ ಫೌಂಡೇಶನ್ ರವರ ದ್ವಿತೀಯ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಕಲ್ಪವೃಕ್ಷೋತ್ಸವ ದ್ವಿತೀಯ ಸಮ್ಮೇಳನ 2026-27 ರ ಸಮ್ಮೇಳನದಲ್ಲಿ ಹುನಗುಂದ ತಾಲೂಕಿನ ಹಿರೇಮಳಗಾವಿ ಗ್ರಾಮದ ಗಣಿತ ಶಿಕ್ಷಕರಾಗಿರುವ ಶ್ರೀ ಮುತ್ತು ವಡ್ಡರ ಇವರ ಶೈಕ್ಷಣಿಕ ಹಾಗೂ ಸಾಹಿತ್ಯ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಆಗಿರುವ ಶ್ರೀ ಕನಕ ಪ್ರೀತೀಶ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿರುವ ಶ್ರೀ ಹೆಚ್.ಎಸ್ ಗೌಡರ್ ಅವರು ತಿಳಿಸಿದ್ದಾರೆ.
ವೃತ್ತಿಯಲ್ಲಿ ಶಿಕ್ಷಕರಾಗಿರುವ ಶ್ರೀ ಮುತ್ತು ವಡ್ಡರ ಅವರು ಪ್ರವೃತ್ತಿಯಲ್ಲಿ ಸಾಹಿತ್ಯ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡಿದ್ದು.

ಅತಿ ಸರಳ ಗಣಿತ, ಎಲೆಮರೆ ಕಾಯಿಗಳು, ಸನ್ಮಾರ್ಗದ ದುಂಬಿ ಮತ್ತು ಬದಲಾಗು ನೀ ಬೆಳಕಾಗು ನೀ ಎಂಬ ಸ್ಫೂರ್ತಿದಾಯಕ ಕೃತಿಗಳನ್ನು ರಚಿಸಿದ್ದಾರೆ. ಜೊತೆ ಜೊತೆಗೆ ನಾಡಿನ ಹಲವಾರು ಪತ್ರಿಕೆಗಳಿಗೆ ಕಥೆ, ನ್ಯಾನೋ ಕಥೆಗಳು, ಲೇಖನ ಹಾಗೂ ಕವನಗಳನ್ನು ಬರೆದು ಪ್ರಕಟಿಸಿದ್ದಾರೆ.
ಇವರು ಪ್ರತಿನಿತ್ಯ ವ್ಯಾಟ್ಸಪ್ ಬಳಗದಲ್ಲಿ ಸುಮಾರು 6,000 ಜನರಿರುವ ಜ್ಞಾನ ಜ್ಯೋತಿ ದಿನಂ ಪ್ರತಿ ಎಂಬ ಬಳಗದಲ್ಲಿ ನಿತ್ಯ ರಸ ಪ್ರಶ್ನೆ ಕಾರ್ಯಕ್ರಮ ನಡೆಸುತ್ತಿದ್ದಾರೆ.
ಇವರ ಶೈಕ್ಷಣಿಕ ಹಾಗೂ ಸಾಹಿತ್ಯ ಸೇವೆಯನ್ನು ಪರಿಗಣಿಸಿ 2026-27 ನೇ. ಸಾಲಿನ ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿದ್ದು.

ಇದೇ ತಿಂಗಳು ದಿನಾಂಕ 28 ರಂದು ಬಾಗಲಕೋಟ ಜಿಲ್ಲೆಯ ಚಿಕ್ಕಮ್ಯಾಗೇರಿಯ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ನಡೆಯುವ ಕಲ್ಪವೃಕ್ಷೋತ್ಸವ ದ್ವಿತೀಯ ಸಮ್ಮೇಳನದಲ್ಲಿ ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.
ಪ್ರಶಸ್ತಿಗೆ ಭಾಜನರಾಗಿರುವ ಶಿಕ್ಷಕ ಶ್ರೀ ಮುತ್ತು ವಡ್ಡರ ಅವರಿಗೆ ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್ ಕೂಡ ಹೃತ್ಪೂರ್ವಕ ಅಭಿನಂದನೆಗಳು ಸಲ್ಲಿಸಲು ಬಯಸುತ್ತದೆ ಎಂದು ಶುಭ ಹಾರೈಸಿದರು.

