ಮಹಾತ್ಮರ ಭಾವ ಚಿತ್ರದ ನಿರಂತರ ವೀಕ್ಷಣೆ ಯಿಂದ ಜೀವನದಲ್ಲಿ ಪರಿವರ್ತನೆ ಸಾಧ್ಯ – ಮಾತಾಜೀ ತ್ಯಾಗಮಯೀ.
ಚಳ್ಳಕೆರೆ ಮೇ.24

ಶ್ರೀರಾಮಕೃಷ್ಣ,ಶ್ರೀಶಾರದಾದೇವಿ, ಸ್ವಾಮಿ ವಿವೇಕಾನಂದ, ಬುದ್ಧ, ಬಸವ ಸೇರಿದಂತೆ ಮಹಾತ್ಮರ ಭಾವ ಚಿತ್ರದ ನಿರಂತರ ವೀಕ್ಷಣೆ ಯಿಂದ ನಮ್ಮ ಜೀವನದಲ್ಲಿ ಮಹತ್ತರವಾದ ಪರಿವರ್ತನೆ ಸಾಧ್ಯವಾಗುತ್ತದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ತಿಳಿಸಿದರು.

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಯುವಕ-ಯುವತಿಯರಿಗಾಗಿ ಆಯೋಜಿಸಿದ್ದ ವಾರದ “ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ ಕಾರ್ಯಕ್ರಮ” ದ ದಿವ್ಯ ಸಾನಿಧ್ಯ ವಹಿಸಿ ಅವರು ಧ್ಯಾನಾಭ್ಯಾಸ ನಡೆಸಿ ರಾಜಕುಮಾರನ ಕಥೆಯ ಬಗ್ಗೆ ಆಶೀರ್ವಚನ ನೀಡುತ್ತಾ ಮಾತನಾಡುತ್ತಿದ್ದರು.

ಸತ್ಸಂಗದ ಆರಂಭದಲ್ಲಿ ಪ್ರಾರ್ಥನೆ ಮತ್ತು ಭಜನೆಯನ್ನು ಯತೀಶ್ ಎಂ ಸಿದ್ದಾಪುರ ನಡೆಸಿ ಕೊಟ್ಟರೆ ಕೊನೆಯಲ್ಲಿ ದಿವ್ಯತ್ರಯರಿಗೆ ಮಂಗಳಾರತಿ, ಸಂನ್ಯಾಸಿ ಗೀತೆಯ ಗಾಯನ ಹಾಗೂ ಪ್ರಸಾದ ವಿನಿಯೋಗ ನಡೆಯಿತು.

ತರಗತಿಯಲ್ಲಿ ಮೀನಾಕ್ಷಿ,ಹೇಮಾಶ್ರೀ,ಹೃತಿಕ್, ಡಾ, ಭೂಮಿಕಾ, ಸಾಯಿಸ್ಪೂರ್ತಿ, ಚೇತನ್, ದರ್ಶನ್, ಸಂತೋಷ್, ಮಂಜುಳಮ್ಮ, ಸುಧಾಮಣಿ, ಸಂಜನಾ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.
