ಕರ್ನಾಟಕ ರಾಜ್ಯ ಶಾಲಾ ಶಿಕ್ಷಕರ ಸಂಘದ – ಅವಿರೋಧವಾಗಿ ಎರಡನೇ ಅವಧಿಗೆ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆ.
ಢವಳಗಿ ಮೇ.31

ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಬಿ.ಎಸ್ ಶೇಖಣ್ಣವರ್ ಅವರು ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರದ ಜಿಲ್ಲಾ ಉಪಾಧ್ಯಕ್ಷರಾಗಿ ಸತತ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯಾದ ಮಲ್ಲಿಕಾರ್ಜುನ ಮೆಡಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಾಧ್ಯಕ್ಷರಾಗಿ ಆಯ್ಕೆಯಾದ ಬಿ.ಎಸ್ ಶೇಖಣ್ಣವರ್ ಮಾತನಾಡಿ ನನ್ನನ್ನು ಎರಡನೇ ಅವಧಿಗೆ ಸಂಘದ ಉಪಾಧ್ಯಕ್ಷರನ್ನಾಗಿ ಅದರಲ್ಲೂ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಶಿಕ್ಷಕರ ಬಳಗಕ್ಕೆ ಧನ್ಯವಾದಗಳು ಎಂದು ತಿಳಿಸಿದರು.
ವರದಿ:-ಜಿ.ಎನ್ ಬೀರಗೊಂಡ (ಮುತ್ತು)

