ಜೂನ್ 2 ರಂದು ಡಾ, ವೈ.ರಾಜಾರಾಮ್ ಗುರುಗಳಿಂದ – ವಿಶೇಷ ಪ್ರವಚನ.

ಚಳ್ಳಕೆರೆ ಮೇ.31

ತ್ಯಾಗರಾಜ ನಗರದ ಶ್ರೀಶಾರದಾದೇವಿ ಸತ್ಸಂಗ ಕೇಂದ್ರ ದಿಂದ “ಅಧಿಕ ಮಾಸದ ಪ್ರಯುಕ್ತ ವಿಶೇಷ ಸತ್ಸಂಗ” ಕಾರ್ಯಕ್ರಮವನ್ನು ಜೂನ್ 2 ರ ಮಂಗಳವಾರ ಸಂಜೆ ಶ್ರೀಮತಿ ನಂಜಮ್ಮ ಕೆಂಚಪ್ಪ ಶಿಕ್ಷಕರ ತ್ಯಾಗರಾಜ ನಗರದ ಸವಿತಾ ನಿವಾಸದಲ್ಲಿ ಆಯೋಜಿಸಿದ್ದು.

ಸತ್ಸಂಗದ ಅಂಗವಾಗಿ 5 ಗಂಟೆ ಯಿಂದ ಸಾಮೂಹಿಕ ಶ್ರೀವಿಷ್ಣು ಸಹಸ್ರನಾಮ ಪಾರಾಯಣ, ವಿಶೇಷ ಭಜನೆ, ಶ್ರೀನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪೂಜ್ಯ ಡಾ, ವೈ.ರಾಜಾರಾಮ್ ಗುರುಗಳಿಂದ “ಅಧಿಕ ಮಾಸದ ವೈಶಿಷ್ಟ್ಯ” ಎಂಬ ವಿಷಯವಾಗಿ ವಿಶೇಷ ಪ್ರವಚನ, ಮಂಗಳಾರತಿ ಹಾಗೂ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸತ್ಸಂಗ ಕೇಂದ್ರದ ಮುಖ್ಯಸ್ಥರಾದ ಶ್ರೀಮತಿ ಎಚ್ ಲಕ್ಷ್ಮೀದೇವಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button