ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿರಿ – ತಹಶೀಲ್ದಾರ್ ಚಾಲಕ್.
ಹುಲ್ಲೂರ ಜೂ.04

ಸೋಮವಾರ ದಿಂದ ಶಾಲೆಗಳು ಪುನರಾರಂಭ ಗೊಂಡಿದ್ದು, ಮುದ್ದೇಬಿಹಾಳ ತಾಲೂಕಿನ ಹುಲ್ಲೂರು ಗ್ರಾಮದ ಎಸ್ ಎನ್ ಡಿ ಪಬ್ಲಿಕ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲೆಯ ಸಂಸ್ಥೆಯ ಅಧ್ಯಕ್ಷ ಎಂ.ಎಸ್ ಕೊಪ್ಪ ಅವರ ನೇತೃತ್ವದಲ್ಲಿ ಶಿಕ್ಷಕ ವೃಂದದವರು ಜಂಟಿಯಾಗಿ ಸರಸ್ವತಿ ದೇವಿಯ ಭಾವ ಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಿದರು.
ಇದೇ ವೇಳೆ ಶಾಲೆಗೆ ಅ ನಿರೀಕ್ಷಿತವಾಗಿ ಭೇಟಿ ನೀಡಿದ ತಾಲೂಕಿನ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಸರಸ್ವತಿ ದೇವಿಗೆ ನಮಸ್ಕರಿಸಿದವರು.

ನಂತರ ಶಾಲೆಗೆ ಆಗಮಿಸಿದ ಪುಟ್ಟ ಮಕ್ಕಳಿಗೆ ಆತ್ಮೀಯವಾಗಿ ಹೂವುಗಳನ್ನು ನೀಡುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಶುಭ ಹಾರೈಸಿದರು.
ಬಳಿಕ ಮಾತನಾಡಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ಕೊಡುವುದು ಅತ್ಯಂತ ಅಗತ್ಯವಾಗಿದೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಮುನ್ನೆಲೆಗೆ ತರುವ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪಾಲಕರು ಒಟ್ಟಾಗಿ ಹೆಚ್ಚಿನ ಕಾಳಜಿ ವಹಿಸಿ ಶ್ರಮಿಸಬೇಕು ಎಂದು ಪ್ರಮುಖ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್ ಕೊಪ್ಪ ಶಾಲೆಯ ಮುಖ್ಯ ಗುರು ಮಾತೆ ರೇಖಾ.ಎಂ.ಎಸ್ ಹಾಗೂ ಶಾಲೆಯ ಶಿಕ್ಷಕರು, ಶಿಕ್ಷಕಿಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಬಸವರಾಜ. ಸಂಕನಾಳ ಮುದ್ದೇಬಿಹಾಳ

