13 ರಂದು ಎ‌.ಆರ್ ಮಣಿಕಾಂತ್ ರವರ ಉಪನ್ಯಾಸ ಹಾಗೂ ಸಂವಾದ – ಕಾರ್ಯಕ್ರಮ ಆಯೋಜನೆ.

ಚಿತ್ರದುರ್ಗ ಜೂ.11

ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆಯ ವತಿಯಿಂದ ದಿನಾಂಕ 13-06-2026, ಶನಿವಾರ ಬೆಳಿಗ್ಗೆ 10.00 ಗಂಟೆಗೆ ನಗರದ ಪತ್ರಕರ್ತರ ಭವನದಲ್ಲಿ ವಿಶೇಷ ಸಾಹಿತ್ಯಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಖ್ಯಾತ ಅಂಕಣಕಾರ, ಪತ್ರಕರ್ತ ಹಾಗೂ ಲೇಖಕರಾದ “ಎ.ಆರ್ ಮಣಿಕಾಂತ್” ಅವರು ಭಾಗವಹಿಸಿ, “ಅಂಕಣಕಾರರಾಗಲು ನಡೆಸುವ ಸಿದ್ಧತೆ ಮತ್ತು ಅಪ್ಪ-ಅಮ್ಮ ಪುಸ್ತಕದ ಒಳ ಕಥೆಗಳು ಹಾಗೂ ಸ್ವಾರಸ್ಯಕರ ಘಟನೆಗಳ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.

ಸಾಹಿತ್ಯ, ಪತ್ರಿಕೋದ್ಯಮ ಹಾಗೂ ಅಂಕಣ ಬರವಣಿಗೆಯಲ್ಲಿ ಅಪಾರ ಅನುಭವ ಹೊಂದಿರುವ ಎ.ಆರ್ ಮಣಿಕಾಂತ್ ಅವರ ಮಾತುಗಳು ಯುವ ಬರಹಗಾರರು ಹಾಗೂ ಸಾಹಿತ್ಯಾಸಕ್ತರಿಗೆ ಪ್ರೇರಣೆ ಯಾಗಲಿವೆ.

ಉಪನ್ಯಾಸದ ನಂತರ ವಿದ್ಯಾರ್ಥಿಗಳು ಮತ್ತು ಸಾಹಿತ್ಯಾಸಕ್ತರೊಂದಿಗೆ ಸಂವಾದ ಕಾರ್ಯಕ್ರಮವೂ ನಡೆಯಲಿದೆ.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪೂಜ್ಯ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಗಳು, ಮಾದಾರ ಚೆನ್ನಯ್ಯ ಗುರುಪೀಠ, ಚಿತ್ರದುರ್ಗ ವಹಿಸಲಿದ್ದಾರೆ.

ಕಾರ್ಯಕ್ರಮವನ್ನು ಡಾ, ಕೆ.ಎಂ ವೀರೇಶ್, ಸಂಸ್ಥಾಪಕರು ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆಗಳು. ಚಿತ್ರದುರ್ಗ ಇವರು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಶಾರದಾ ಜೈರಾಮ್ ವಹಿಸಲಿದ್ದು,ಗೌರವ ಉಪಸ್ಥಿತಿಯಲ್ಲಿ ಖ್ಯಾತ ವಕೀಲರಾದ ಬಿ.ಕೆ. ರಹಮತ್ ಉಲ್ಲಾ, ಎಚ್. ಸತೀಶ್ ಕುಮಾರ್ ಹಾಗೂ ಎಂ.ಬಿ. ಜಯದೇವಮೂರ್ತಿ ಭಾಗವಹಿಸಲಿದ್ದಾರೆ.

ಸಾಹಿತ್ಯ, ಪತ್ರಿಕೋದ್ಯಮ ಹಾಗೂ ಅಂಕಣ ಬರವಣಿಗೆಯ ಬಗ್ಗೆ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು, ಯುವ ಬರಹಗಾರರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದು ಕೊಳ್ಳುವಂತೆ ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆಯ ಸಂಸ್ಥಾಪಕರಾದ ದಯಾ ಪುತ್ತೂರ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button