ವಿಶ್ವ ಅಂತರರಾಷ್ಟ್ರೀಯ ಯೋಗ – ದಿನಾಚರಣೆ ಆಚರಣೆ.

ಆಲಮೇಲ ಜೂ.22

ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಆಲಮೇಲದಲ್ಲಿ ವಿಶ್ವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವಿವಿಧ ಯೋಗಾಸನಗಳು, ಪ್ರಾಣಾಯಾಮ ಮತ್ತು ಧ್ಯಾನಾಭ್ಯಾಸವನ್ನು ನೆರವೇರಿಸಿದರು.

ಯೋಗವು ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯವನ್ನು ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ಪ್ರತಿ ದಿನ ಯೋಗಾಭ್ಯಾಸವನ್ನು ರೂಢಿಸಿ ಕೊಳ್ಳಬೇಕು ಎಂದು ದೈಹಿಕ ಶಿಕ್ಷಕಿ ಸೀತಾ ಆರೇಶಂಕರ ವಿದ್ಯಾರ್ಥಿಗಳಿಗೆ ತಿಳಿಸಿದರು.

ಯೋಗದಿಂದ ಏಕಾಗ್ರತೆ, ಆತ್ಮ ವಿಶ್ವಾಸ, ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ನೆಮ್ಮದಿ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್ ಮತ್ತು ಒತ್ತಡದ ಜೀವನ ಶೈಲಿಯಿಂದ ದೂರವಿದ್ದು, ಆರೋಗ್ಯಕರ ಜೀವನಕ್ಕಾಗಿ ಯೋಗವನ್ನು ತಮ್ಮ ದಿನಚರಿಯ ಭಾಗವಾಗಿಸಿ ಕೊಳ್ಳಬೇಕು ಎಂದು ಕರೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಯೋಗ ದಿನಾಚರಣೆಯನ್ನು ಯಶಸ್ವಿ ಗೊಳಿಸಿದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರೇವಣಸಿದ್ದಯ್ಯ.ಹಿರೇಮಠ.ಆಲಮೇಲ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button