ಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ – ಭೂಮಿ ಪೂಜೆ ಲೋಕಾರ್ಪಣೆ.
ಅಲಮೇಲ ಜೂ.27

ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು. ಇನ್ನಿಷ್ಟು ಮೂಲಸೌಕರ್ಯ ಮತ್ತು ಜನಪರ ಯೋಜನೆಗಳನ್ನು ಮಂಜೂರು ಮಾಡುವ ಮೂಲಕ ಆಲಮೇಲ ತಾಲ್ಲೂಕುವನ್ನು ಮಾದರಿ ತಾಲ್ಲೂಕಿನಾಗಿ ಮಾಡಲು ಶ್ರಮಿಸುತ್ತೇವೆ ಎಂದು ಲೋಕ ಪ್ರಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು.
ಗುರುವಾರ ಅಲಮೇಲ ತಾಲೂಕಿನ ತೋಟಗಾರಿಕೆ ಕಾಲೇಜು ಕಡಣಿ ಬ್ರಿಡ್ಜ್ ತಾಲೂಕು ಕ್ರೀಡಾಂಗಣ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕೋಮಗಾರಿಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಎಂ ಬಿ ಪಾಟೀಲ ಮಾತನಾಡಿ ದಿವಂಗತ ಎಂ ಸಿ ಮನಗೂಳಿ ಅವರು ಮೊದಲು ಬಾರಿಗೆ ಶಾಸಕರಾಗಿ ಸಚಿವರಾಗಿ ಕ್ಷೇತ್ರದ ರೈತರ ಅನುಕೂಲಕ್ಕಾಗಿ ಗುತ್ತಿ ಬಸವಣ್ಣ ಏತ ನೀರಾವರಿಗಾಗಿ ಬರಿಗಾಲಿನಿಂದ ಹೋರಾಟ ಮಾಡಿ ನೀರಾವರಿ ಕಲ್ಪಿಸಿದ್ದಾರೆ.
ಹಾಗೂ ಎರಡನೇ ಅವಧಿಗೆ ಶಾಸಕರಾಗಿ ಸಚಿವರಾದ್ದಾಗ ಕ್ಷೇತ್ರದ ನೂತನ ಆಲಮೇಲ ತಾಲ್ಲೂಕನಲ್ಲಿ ತೋಟಗಾರಿಕೆ ಕಾಲೇಜು ಮಂಜೂರು ಮಾಡಿಸಿ ಶಾಶ್ವತವಾದಂತ ಅಭಿವೃದ್ಧಿ ಕೆಲಸವನ್ನು ಅವರು ಮಾಡಿ ಈ ಕ್ಷೇತ್ರಕ್ಕೆ ಮಾದರಿ ಯಾಗಿಸಿದ್ದಾರೆ.
ಇಂದಿನ ಶಾಸಕ ಅಶೋಕ ಮನಗೂಳಿ ಅವರು ಕೂಡ ತಂದೆಯ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸಿ ಕೊಂಡು ಕ್ಷೇತ್ರದ ಅಭಿವೃದ್ಧಿ ಮಾಡುತ್ತಿದ್ದಾರೆ. ಅವರ ಅಭಿವೃದ್ಧಿ ಕೆಲಸಗಳಿಗೆ ನಮ್ಮ ಸರಕಾರದಿಂದ ಎಲ್ಲ ರೀತಿಯ ಸಹಕಾರ ನೀಡುವೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಶಾಸಕ ಅಶೋಕ ಮನಗೂಳಿ ಮಾತನಾಡಿ. ತಂದೆಯವರ ಸಂಕಲ್ಪದಂತೆ ಕಡಣಿ ಬ್ಯಾರೇಜ್ ಹಾಗೂ ತೋಟಗಾರಿಕೆ ಕಾಲೇಜು ಶಂಕು ಸ್ಥಾಪನೆಯಾಗಿ ಶೀಘ್ರದಲ್ಲಿ ಜನರ ಸೇವೆಗೆ ಮುಕ್ತವಾಗಲಿವೆ ಎಂದರು.
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ. ಮಾಜಿ ಸಚಿವ ಶಿವಾನಂದ ಪಾಟೀಲ. ಭಾಗವಹಿಸಿದರು.
ಸಾನಿಧ್ಯ ವಹಿಸಿದ್ದ ಆಲಮೇಲದ ಗುರು ಸಂಸ್ಥಾನ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯರು ಮಾತನಾಡಿದರು. ಒಟ್ಟು 317 ಕೋಟಿ ರೂಪಾಯಿ ವೆಚ್ಚದಲ್ಲಿ ಸುಮಾರು 6 ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಆಳ್ಳೋಳಿ ಮಠದ ಶ್ರೀಶೈಲಯ್ಯ ಸ್ವಾಮಿಗಳು. ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತಾ ನಾಯಕ. ಡಾ, ಸಂದೀಪ್ ಪಾಟೀಲ. ಪಟ್ಟಣ ಪಂಚಾಯತಿ ಅಧ್ಯಕ್ಷ ಸೈಯದ್ ಸುಂಬಡ ಮಾಜಿ ಶಾಸಕ ಶರಣಪ್ಪ ಸುಣಗಾರ. ಹಾಗೂ ವಿವಿಧ ನಿಗಮದ ಅಧ್ಯಕ್ಷರು. ಗ್ಯಾರಂಟಿ ಸಮಿತಿಯ ಅಧ್ಯಕ್ಷರು. ಪಟ್ಟಣ ಪಂಚಾಯಿತಿಯ ಸದಸ್ಯರು. ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಿರಿಯ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಮಳೆಯನ್ನು ಲೆಕ್ಕಿಸದೆ ಕಾರ್ಯಕ್ರಮವನ್ನು ವೀಕ್ಷಿಸಿದರು ಮತ ಕ್ಷೇತ್ರದ ಎಲ್ಲಾ ಮುಖಂಡರು ಯುವಕರು ಭಾಗವಹಿಸಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ರೇವಣಸಿದ್ದಯ್ಯ ಹಿರೇಮಠ ಆಲಮೇಲ
