5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೊ ಲಸಿಕೆ ಕಡ್ಡಾಯ – ಡಾ, ಶರಣಬಸವಗೌಡ.
ಮಾನ್ವಿ ಜೂ.28

5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನದಡಿ ತಪ್ಪದೇ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ತಾಲೂಕು ವೈದ್ಯಾಧಿಕಾರಿ ಡಾ. ಶರಣಬಸವಗೌಡ ಹೇಳಿದರು.
ಮಾನ್ವಿ ಪಟ್ಟಣದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ಪೋಷಕರೂ ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸ ಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸ ಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಕ್ಕಳ ತಜ್ಞ ಡಾ, ಶರಣಪ್ಪ ಡಿ, ಮುಖ್ಯ ವೈದ್ಯಾಧಿಕಾರಿ ಡಾ, ಸುಮನ್ ಸೇರಿದಂತೆ ಆರೋಗ್ಯ ಇಲಾಖೆ ವೈದ್ಯರು, ಸಿಬ್ಬಂದಿ, ಆಶಾ ಕಾರ್ಯ ಕರ್ತೆಯರು, ಅಂಗನವಾಡಿ ಕಾರ್ಯ ಕರ್ತೆಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

