ನೈಜ ಮತದಾರರು ಯಾರೂ ಪಟ್ಟಿಯಿಂದ ಹೊರ ಗುಳಿಯದಂತೆ ಕ್ರಮ ಕೈಗೊಳ್ಳಿ – ರಾಜಾ ರಾಮಚಂದ್ರನಾಯಕ.

ಮಾನ್ವಿ ಜೂ.29

ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ತಾಲೂಕ ಆಡಳಿತದಿಂದ ಆಯೋಜಿಸಿದ್ದ ಎಸ್.ಐ.ಆರ್-2026 ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಸಭೆಯಲ್ಲಿ, ಜನತಾ ದಳ (ಜಾತ್ಯತೀತ) ಪಕ್ಷದ ರಾಜ್ಯ ಯುವ ಘಟಕದ ಉಪಾಧ್ಯಕ್ಷರಾದ ರಾಜಾ ರಾಮಚಂದ್ರನಾಯಕ ಅವರು ಜಿಲ್ಲಾಧಿಕಾರಿ ಪೂವಿತಾ.ಎಸ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಮಾನ್ವಿ ವಿಧಾನ ಸಭಾ ಕ್ಷೇತ್ರದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಗಾಗಿ ನಿಯೋಜಿಸಲಾದ ಬಿ.ಎಲ್.ಓ-ಗಳು ತಮ್ಮ ವ್ಯಾಪ್ತಿಯ ಪ್ರತಿಯೊಬ್ಬ ಮತದಾರರ ಮನೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ, ಮ್ಯಾಪಿಂಗ್ ನಡೆಸಿ ಅಗತ್ಯ ದಾಖಲೆಗಳನ್ನು ಪಡೆದು ದಾಖಲಿಸಬೇಕು. ಜೊತೆಗೆ ಬಿ.ಎಲ್.ಎ-2 ಗಳ ಸಹಯೋಗದೊಂದಿಗೆ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ, ಮಾನ್ವಿ ವಿಧಾನ ಸಭಾ ಕ್ಷೇತ್ರದ ಯಾವುದೇ ನೈಜ ಮತದಾರರು ಪಟ್ಟಿಯಿಂದ ಹೊರ ಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷರಾದ ಡಾ. ಈರಣ್ಣ ಮರ್ಲಟ್ಟಿ, ಮೌನೇಶಗೌಡ ಹೆಚ್. ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ಹುಸೇನ್ ಭಾಷಾ ನಕ್ಕುಂದಿ ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button