ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ, ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ – ಗ್ರಾಮಸ್ಥರ ಆಕ್ರೋಶ.

ವಿಭೂತಿಹಳ್ಳಿ ಜು.03

ಆಲಮೇಲ ತಾಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿನ ತೀವ್ರ ಅಭಾವ ತಲೆದೋರಿದ್ದು, ಗ್ರಾಮಸ್ಥರು ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ತಕ್ಷಣವೇ ನೀರು ಪೂರೈಸುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದ್ದಾರೆ.ಗ್ರಾಮದಲ್ಲಿ ಸಮರ್ಪಕವಾಗಿ ನೀರು ಸರಬರಾಜು ಆಗುತ್ತಿಲ್ಲ.

ಪರ್ಯಾಯ ವ್ಯವಸ್ಥೆ ಕಲ್ಪಿಸ ಬೇಕಾದ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಇತ್ತ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕುಡಿಯುವ ನೀರಿಗಾಗಿ ಕಿಲೋ ಮೀಟರ್ ಗಟ್ಟಲೆ ದೂರ ಅಲೆಯ ಬೇಕಾದ ದುಃಸ್ಥಿತಿ ಬಂದೊದಗಿದೆ ಎಂದು ಮಹಿಳೆಯರು ಅಳಲು ತೋಡಿ ಕೊಂಡಿದ್ದಾರೆ.

ಪ್ರಮುಖ ಬೇಡಿಕೆಗಳು:-

ಗ್ರಾಮಕ್ಕೆ ತಕ್ಷಣವೇ ಟ್ಯಾಂಕರ್ ಮೂಲಕ ಶುದ್ಧ ಕುಡಿಯುವ ನೀರನ್ನು ಪೂರೈಸ ಬೇಕು. ಕೆಟ್ಟು ಹೋಗಿರುವ ಬೋರ್‌ ವೆಲ್ ಹಾಗೂ ಪೈಪ್‌ ಲೈನ್‌ಗಳನ್ನು ಯುದ್ಧೋಪಾದಿಯಲ್ಲಿ ದುರಸ್ತಿ ಮಾಡಬೇಕು. ನೀರಿನ

ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳಬೇಕು.ಸಮಸ್ಯೆಯನ್ನು ಇಷ್ಟರಲ್ಲೇ ಬಗೆಹರಿಸದಿದ್ದರೆ ಮುಂಬರುವ ದಿನಗಳಲ್ಲಿ ತಾಲೂಕ ಕಚೇರಿ ಮುಂಭಾಗದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮಹಿಳೆಯರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ರೇವಣಸಿದ್ದಯ್ಯ ಹಿರೇಮಠ ಆಲಮೇಲ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button