ಭಗವಂತನ ಚಿಂತನೆಯಿಂದ ಜನನ-ಮರಣ ಚಕ್ರದಿಂದ ಬಿಡುಗಡೆ – ಮಾತಾಜೀ ತ್ಯಾಗಮಯೀ.

ಚಳ್ಳಕೆರೆ ಜು.05

ಪೂಜ್ಯ ಮಾತಾಜೀ ತ್ಯಾಗಮಯೀ ಅವರಿಂದ “ಮಹಾತೀರ್ಥಗಳಲ್ಲಿ ಮಹಾಮಾತೆ” ಎಂಬ ವಿಷಯವಾಗಿ ವಿಶೇಷ ಪ್ರವಚನ 🏵️

ಸದಾ ಭಗವಂತನ ಚಿಂತನೆ ಮಾಡುವುದರಿಂದ ಜನನ-ಮರಣ ಚಕ್ರದಿಂದ ಬಿಡುಗಡೆ ಪಡೆಯಲು ಸಾಧ್ಯವಾಗುತ್ತದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ ತಿಳಿಸಿದರು.

ದಿವ್ಯತ್ರಯರಿಗೆ ಮಂಗಳಾರತಿ

ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ ವಾರದ ವಿಶೇಷ ಸತ್ಸಂಗ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು “ಮಹಾತೀರ್ಥಗಳಲ್ಲಿ ಮಹಾಮಾತೆ” ಎಂಬ ವಿಷಯವಾಗಿ ವಿಶೇಷ ಪ್ರವಚನ ನೀಡಿದರು.

ಶ್ರೀಮಾತೆ ಶಾರದಾದೇವಿಯವರು ಕೈಗೊಂಡಿದ್ದ ಕಾಶಿ-ಅಯೋಧ್ಯೆ-ಬೃಂದಾವನ ಯಾತ್ರೆಯ ಬಗ್ಗೆ ಮಾತನಾಡಿದರು.

ಸತ್ಸಂಗದ ಪ್ರಯುಕ್ತ ಯತೀಶ್ ಎಂ ಸಿದ್ದಾಪುರ ನೇತೃತ್ವದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಿಂದ ಸಾಮೂಹಿಕ ಭಜನೆ, ದಿವ್ಯತ್ರಯರಿಗೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು.

ಕಾರ್ಯಕ್ರಮದಲ್ಲಿ ವನಜಾಕ್ಷಿ ಮೋಹನ್, ಪಿ.ಎಸ್ ಮಾಣಿಕ್ಯ ಸತ್ಯನಾರಾಯಣ, ಜಿ.ಯಶೋಧಾ ಪ್ರಕಾಶ್, ಬಿ.ಸುಮನಾ, ಭಾವನಾ, ಗೀತಾ ವೆಂಕಟೇಶ್, ಇಂದು, ಚೆನ್ನಕೇಶವ ಸೇರಿದಂತೆ ಸದ್ಭಕ್ತರು ಭಾಗವಹಿಸಿದ್ದರು.

ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button