ಸಿಂಹಾದ್ರಿ ಸದ್ಗುರುಗಳ 106 ನೇ. ವರ್ಷದ ಜಯಂತ್ಯುತ್ಸವದ ಪ್ರಯುಕ್ತ – ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.
ಚಳ್ಳಕೆರೆ ಜು.09

ನಗರದ ಹೊರ ವಲಯದ ನರಹರಿ ನಗರದ ಶ್ರೀನರಹರಿ ಸೇವಾ ಪ್ರತಿಷ್ಠಾನದಿಂದ ಬ್ರಹ್ಮಶ್ರೀ ಸಿಂಹಾದ್ರಿ ಸದ್ಗುರುಗಳ 106 ನೇ. ವರ್ಷದ ಜಯಂತ್ಯುತ್ಸವದ ಪ್ರಯುಕ್ತ 2025-2026 ನೇ. ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜುಲೈ 12 ರ ಭಾನುವಾರ ಬೆಳಿಗ್ಗೆ 10.30 ಕ್ಕೆ ಶ್ರೀನರಹರೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪೂಜ್ಯ ವೈ.ರಾಜಾರಾಮ್ ಗುರುಗಳು ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಎನ್.ಸುಧಾಕರ್ ಹಾಗೂ ಎನ್ ಪದ್ಮನಾಭ ಭಾಗವಹಿಸಲಿದ್ದಾರೆ ಎಂದು ಶ್ರೀನರಹರಿ ಸದ್ಗುರು ಆಶ್ರಮದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

