ಮೋಹನ್ ಕುಮಾರ್ ದಾನಪ್ಪನವರ ಖಡಕ್ ಮನವಿಗೆ ಮಣಿದ ಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ – ಗುಟ್ಕಾ ಧೂಮಪಾನಿಗಳಿಗೆ ಬಿತ್ತು ಬೀಗ.
ಬೆಂಗಳೂರು ಜು.09

ರಾಜ್ಯದ ಲಕ್ಷಾಂತರ ಸಾರ್ವಜನಿಕ ಪ್ರಯಾಣಿಕರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆಯು ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಸಾರಿಗೆ ಇಲಾಖೆಯ ಎಲ್ಲಾ ನಿಗಮದ ಸಾರ್ವಜನಿಕ ಬಸ್‌ಗಳಲ್ಲಿ ಗುಟ್ಕಾ ತಂಬಾಕು ಜಗಿಯುವ ಹಾಗೂ ಧೂಮಪಾನ ಮಾಡುವವರ ವಿರುದ್ಧ ನಿಯಮಾನುಸಾರ ಕಠಿಣ ಕಾನೂನು ಕ್ರಮ ಜರುಗಿಸಲು ಸಾರಿಗೆ ಸಚಿವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಗೌರವಾನ್ವಿತ ಸದಸ್ಯರಾದ ಶ್ರೀ ಮೋಹನ್ ಕುಮಾರ್ ದಾನಪ್ಪ ಅವರು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬಸ್‌ಗಳಲ್ಲಿ ತಂಬಾಕು ಧೂಮಪಾನ ಮುಕ್ತ ವಾತಾವರಣ ನಿರ್ಮಿಸಬೇಕೆಂದು ಕೋರಿ ಸರ್ಕಾರಕ್ಕೆ ಅಧಿಕೃತ ಮನವಿ ಪತ್ರ ಸಲ್ಲಿಸಿದ್ದರು. ಸಾರ್ವಜನಿಕರ ಹಿತ ಕಾಯುವ ನಿಟ್ಟಿನಲ್ಲಿ ಶ್ರೀ ಮೋಹನ್ ಕುಮಾರ್ ಅವರು ತಂದಿದ್ದ ಈ ಪ್ರಸ್ತಾಪಕ್ಕೆ ತಕ್ಷಣವೇ ಸ್ಪಂದಿಸಿದ ಮಾನ್ಯ ಸಾರಿಗೆ ಸಚಿವರು ಈ ಕುರಿತು ಸೂಕ್ತ ನಿರ್ದೇಶನ ಹಾಗೂ ಆದೇಶ ನೀಡುವಂತೆ ಸಾರಿಗೆ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ದಿನ ನಿತ್ಯ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ಧೂಮಪಾನ ಹಾಗೂ ತಂಬಾಕು ಸೇವನೆ ಯಿಂದ ತೀವ್ರ ತೊಂದರೆ ಯಾಗುತ್ತಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆಯು ಇನ್ನೂ ಮುಂದೆ ಬಸ್‌ಗಳಲ್ಲಿ ಇಂತಹ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ದಂಡನೆ ಹಾಗೂ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಮತ್ತು ಸಾರ್ವಜನಿಕರ ಪರವಾಗಿ ಧ್ವನಿ ಎತ್ತಿದ ಶ್ರೀ ಮೋಹನ್ ಕುಮಾರ್ ದಾನಪ್ಪನವರ ಕಾರ್ಯಕ್ಕೆ ರಾಜ್ಯಾದ್ಯಂತ ಸಾರ್ವಜನಿಕ ವಲಯ ದಿಂದ ತೀವ್ರ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.
