ಶ್ರೀ ನರಹರಿ ಸೇವಾ ಪ್ರತಿಷ್ಠಾನ ಹಾಗೂ ನಾಗ ಸಿಂಹಾದ್ರಿ ಚಾರಿಟೀಸ್ ಸಹಯೋಗದಲ್ಲಿ – ಜುಲೈ 11 ರಂದು ಉಚಿತ ಹೃದಯ ತಪಾಸಣಾ ಶಿಬಿರ.
ಚಳ್ಳಕೆರೆ ಜು.09

ನಗರದ ಹೊರ ವಲಯದ ನರಹರಿ ನಗರದ ಶ್ರೀನರಹರಿ ಸೇವಾ ಪ್ರತಿಷ್ಠಾನ ಹಾಗೂ ನಾಗ ಸಿಂಹಾದ್ರಿ ಚಾರಿಟೀಸ್, ಇಂಡಿಯಾನಾ ಎಸ್.ಜೆ.ಎಂ ಹಾರ್ಟ್ ಸೆಂಟರ್, ವಾಸವಿ ಲ್ಯಾಬ್ ನ ಸಹಯೋಗದಲ್ಲಿ ಜುಲೈ 11 ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಶ್ರೀನರಹರೇಶ್ವರ ದೇವಸ್ಥಾನದ ಆವರಣದಲ್ಲಿ “ಉಚಿತ ಆರೋಗ್ಯ ತಪಾಸಣಾ ಶಿಬಿರ” ವನ್ನು ಆಯೋಜಿಸಲಾಗಿದ್ದು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀನರಹರಿ ಸದ್ಗುರು ಆಶ್ರಮದ ಪೀಠಾಧ್ಯಕ್ಷರಾದ ಪೂಜ್ಯ ವೈ.ರಾಜಾರಾಮ್ ಗುರುಗಳು ವಹಿಸಲಿದ್ದು.
ಮುಖ್ಯ ಅತಿಥಿಗಳಾಗಿ ಬಸವೇಶ್ವರ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಡೀನ್ ಡಾ, ರಾಜೇಶ್, ವೈದ್ಯಕೀಯ ಅಧೀಕ್ಷಕರಾದ ಡಾ, ಪಾಲಾಕ್ಷಯ್ಯ ಭಾಗವಹಿಸಲಿದ್ದು.
ಬಸವೇಶ್ವರ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಪಥಾಲಜಿ ವಿಭಾಗದ ಮುಖ್ಯಸ್ಥರಾದ ಡಾ, ಸಿ.ನಾರಾಯಣಮೂರ್ತಿ ಅವರಿಗೆ ಗೌರವ ಸನ್ಮಾನ ಏರ್ಪಡಿಸಲಾಗಿದ್ದು.
ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದು ಕೊಳ್ಳುವಂತೆ ಶ್ರೀನರಹರಿ ಸದ್ಗುರು ಆಶ್ರಮದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.

